Breaking NewsLatestಉತ್ತರ ಕನ್ನಡಜಿಲ್ಲಾ ಸುದ್ದಿರಾಜ್ಯರಾಷ್ಟ್ರೀಯಸುದ್ದಿ

ಭಟ್ಕಳದಲ್ಲಿ ಎನ್ಐಎ ದಾಳಿ : ಭಯೋತ್ಪಾದಕರೊಂದಿಗೆ ಸಂಪರ್ಕ ಆರೋಪದಡಿ ಇಬ್ಬರು ವಶಕ್ಕೆ

ಕಾರವಾರ : ಉಗ್ರಗಾಮಿ ಚಟುವಟಿಕೆಯಲ್ಲಿ ತೊಡಗಿಕೊಂಡವರ ಮೂಲ ಎನ್ನುವ ಕಾರಣಕ್ಕೆ ರಾಷ್ಟ್ರಮಟ್ಟದಲ್ಲಿ ಭಟ್ಕಳದಲ್ಲಿ ಎನ್​​​ಐಎ ದಾಳಿ ನಡೆಸಿದೆ. ಭಯೋತ್ಪಾದನೆ ಆರೋಪದಡಿ ಇಬ್ಬರನ್ನು ವಶಕ್ಕೆ ಪಡೆದಿರುವ ಮಾಹಿತಿ ಲಭ್ಯವಾಗಿದೆ.

ಭಟ್ಕಳದ ಉಮರ್‌ ಸ್ಟ್ರೀಟ್, ತೆಂಗಿನಗುಂಡಿ ಹಾಗೂ ಸಾಗರ ರಸ್ತೆಯಲ್ಲಿರುವ ಮನೆಗಳಿಗೆ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದೆ. ಭಟ್ಕಳದ ಅಮೀನ್ ಜುವೇಬ್, ಜವಾದ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗವಹಿಸಿದ ಆರೋಪದ ಮೇಲೆ ಈ ಹಿಂದೆ ದುಬೈನಲ್ಲಿ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕನೋರ್ವನ ತಮ್ಮನನ್ನೂ ಎನ್ಐಎ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಸ್ಥಳದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಮೊಕ್ಕಾಂ ಹೂಡಿದ್ದು, ಭಟ್ಕಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಬಂಧಿತರು ಐಸಿಸ್ ನಂಟಿರುವ ಆರೋಪದ ಕುರಿತು ಅಧಿಕಾರಿಗಳಿಂದ ತನಿಖೆ ಮುಂದುವರೆದಿದೆ.

Spread the love

Related Articles

Leave a Reply

Your email address will not be published. Required fields are marked *

Back to top button