Breaking NewsLatestಮೆಟ್ರೋರಾಜಕೀಯರಾಜ್ಯಸುದ್ದಿ

ಸಿಎಂ ನನಗೆ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ: ಸಚಿವ ಎಂಟಿಬಿ ನಾಗರಾಜ್ ಗುಡುಗು

ಬೆಂಗಳೂರು : ನೂತನ ಸಚಿವ ಎಂಟಿಬಿ ನಾಗರಾಜ್ ತಮ್ಮ ಟ್ವಿಟರ್ ಖಾತೆಯಲ್ಲಿ ತಮಗೆ ನೀಡಿರುವ ಖಾತೆಯ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದು, ಖಾತೆ ಹಂಚಿಕೆಯಲ್ಲಿ ನನಗೆ ಅಸಮಧಾನವಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ನನ್ನ ನಿರ್ಧಾರ ತಿಳಿಸುವೆ ಎಂದು ಟ್ವೀಟ್ ಮಾಡಿದ್ದಾರೆ.

ಈಗಾಗಲೇ ಎಂಟಿಬಿ ನಾಗರಾಜ್ ಅವರಿಗೆ‌ ಯಡಿಯೂರಪ್ಪನವರ ಸಂಪುಟದಲ್ಲಿ ನೀಡಿದ್ದ ಪೌರಾಡಳಿತ ಹಾಗೂ ಸಕ್ಕರೆ ಖಾತೆ ಬದಲಿಗೆ ಪೌರಾಡಳಿತದ ಜೊತೆಗೆ ಸಣ್ಣ ಕೈಗಾರಿಕೆ ಖಾತೆ ನೀಡಿರುವುದರಿಂದ ಎಂಟಿಬಿ ತೀವ್ರ ಅಸಮಾಧಾನ ಗೊಂಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವಸತಿ ಖಾತೆ ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ.

‌ಯಡಿಯೂರಪ್ಪನವರ ಸಂಪುಟದಲ್ಲಿ ನೀಡಿದ್ದ ಖಾತೆಯನ್ನೇ ಇದೀಗ ಬೊಮ್ಮಾಯಿ ಸಂಪುಟದಲ್ಲೂ ಮತ್ತೇ ನೀಡಿರುವುದು ಎಂಟಿಬಿ ಅವರ ಅಸಮಧಾನಕ್ಕೆ ಕಾರಣವಾಗಿದ್ದು ಅವರು ಈ ಬಗ್ಗೆ ಟ್ವಿಟ್ ಮಾಡಿ ಅಸಮಧಾನ ವ್ಯಕ್ತಪಡಿಸಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೆ ಅಸಮಾಧಾನ ಭುಗಿಲೇಳಲು ಕಾರಣವಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button