Breaking Newsಮೆಟ್ರೋರಾಜ್ಯಸುದ್ದಿ

ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದವರು ನೆಹರೂ: ಸಿಎಂ ಬೊಮ್ಮಾಯಿ

ಬೆಂಗಳೂರು: ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರೂ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿದ ನಂತರ ಸುದ್ದಿಗಾರರಿಗೆ ಅವರು, ರಾಷ್ಟ್ರದ ಆಡಳಿತದ ಚುಕ್ಕಾಣಿಯನ್ನು ಬ್ರಿಟಿಷರಿಂದ ಭಾರತಕ್ಕೆ ತೆಗೆದುಕೊಂಡು ಮುಂದಿನ ಆಡಳಿತ ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿದ ನೆಹರು, ಕೈಗಾರಿಕೆ ಸೇರಿದಂತೆ ಹಲವಾರು ಕ್ಷೇತ್ರಗಳನ್ನು ಅಭಿವೃದ್ಧಿಗೊಳಿಸಿ ನವ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ತಿಳಿಸಿದರು.

ಮಹಾತ್ಮಾ ಗಾಂಧೀಜಿಯವರೊಂದಿಗೆ ನಿಕಟ ಸಂಪರ್ಕ ಹೊಂದಿ ಕಾರ್ಯನಿರ್ವಹಿಸಿದವರು. ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಜೈಲು ವಾಸ ಅನುಭವಿಸಿದ ನೆಹರೂ ಅವರ ಆದರ್ಶಗಳ ಪಾಲನೆ ನಮ್ಮೆಲ್ಲರ ಕರ್ತವ್ಯ ಎಂದರು.

ಮೆಟ್ರೋ ಕಾಮಗಾರಿಯಿಂದಾಗಿ ಸ್ಥಳಾಂತರಗೊಂಡಿದ್ದ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪಿಸುವ ಮೂಲಕ ವಿಧಾನಸೌಧದ ಮೆರಗು ಹೆಚ್ಚಿಸಿದಂತಾಗಿದೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button