ಜಿಲ್ಲಾ ಸುದ್ದಿಬಾಗಲಕೋಟೆ
SSLC ಪರೀಕ್ಷೆಯಲ್ಲಿ ಕಡಿಮೆ ಅಂಕ: ಮನನೊಂದು ವಿದ್ಯಾರ್ಥಿನಿ ನೇಣಿಗೆ ಶರಣು

ಬಾಗಲಕೋಟೆ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿವೆ ಎಂದು ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪೂರ ಪಟ್ಟಣದಲ್ಲಿ ಘಟನೆ ನಡೆದಿದ್ದು, ಐಶ್ವರ್ಯ ಸುಣಗಾರ ಮೃತ ದುರ್ದೈವಿ ವಿದ್ಯಾರ್ಥಿನಿಯಾಗಿದ್ದಾಳೆ.
ನಿನ್ಮೆ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ.ಈ ಕುರಿತು ಲೋಕಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




