Breaking NewsLatestರಾಜ್ಯಸುದ್ದಿ
ಸರ್ಕಾರಿ ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ಶಾಲು ನಿಷೇಧ: ಸಿಎಂ ಬೊಮ್ಮಾಯಿ ಆದೇಶ

ಬೆಂಗಳೂರು: ಸರ್ಕಾರಿ ಸಭೆಗಳಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವುದನ್ನು ನಿಷೇಧಿಸಿ, ಶೀಘ್ರವೇ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಗೆ ಆಗಮಿಸಿದ ಮುಖ್ಯಮಂತ್ರಿಗಳು, ಹೂಗುಚ್ಛ ಸ್ವೀಕರಿಸಲು ನಿರಾಕರಿಸಿದರು. ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದರು.
ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ದೇಶನದಂತೆ, ಇನ್ನು ಮುಂದೆ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.
