Breaking Newsಜಿಲ್ಲಾ ಸುದ್ದಿದಕ್ಷಿಣ ಕನ್ನಡರಾಜಕೀಯ

ಮಹಾತ್ಮ ಗಾಂಧೀಜಿಗೆ ಸಚಿವ ಅಂಗಾರ ಅವಮಾನ ಮಾಡಿದ್ದಾರೆ: ಕಾಂಗ್ರೆಸ್‌ ಆರೋಪ

ಮಂಗಳೂರು: ಜಿಲ್ಲಾಡಳಿತದಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ತಮ್ಮ ಭಾಷಣದಲ್ಲಿ ಮಹಾತ್ಮ ಗಾಂಧಿಯ ಹೆಸರನ್ನು ಕೊನೆಯಲ್ಲಿ ಉಲ್ಲೇಖಿಸುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧಿಗೆ ಅವಮಾನಿಸಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಕೆ.ಹರೀಶ್‌ ಕುಮಾರ್‌ ಆರೋಪಿಸಿದ್ದಾರೆ.

ನಗರದ ಕಾಂಗ್ರೆಸ್‌ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರ ನಡೆಯ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಮಹಾತ್ಮ ಗಾಂಧೀಜಿ ಸಹಿತ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಮಹನೀಯರನ್ನು ಇಂದು ಅಪಹಾಸ್ಯ ಮಾಡುವುದು ನಡೆಯುತ್ತಿದೆ. ಇಂತಹ ದೇಶದ್ರೋಹಿಗಳ ವಿರುದ್ಧ ಹಳ್ಳಿ ಹಳ್ಳಿಗಳಲ್ಲಿ ಸಂಘಟಿತ ಹೋರಾಟ ರೂಪಿಸಬೇಕಾಗಿದೆ ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button