ಚಿಕ್ಕಮಗಳೂರುಜಿಲ್ಲಾ ಸುದ್ದಿರಾಜಕೀಯ
ಸಿದ್ದರಾಮಯ್ಯ ಹೇಳಿದ್ದೆಲ್ಲವೂ ಉಲ್ಟಾ ಆಗಿದೆ; ಅವರ ಬಾಯಲ್ಲಿ ಉಲ್ಟಾ ಮಚ್ಚೆಯಿದೆ : ಸಿ.ಟಿ ರವಿ

ಚಿಕ್ಕಮಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಶಾಸಕ ಸಿ.ಟಿ ರವಿ ವಾಗ್ಬಾಣ ಮುಂದುವರಿಸಿದ್ದು, ಸಿದ್ದರಾಮಯ್ಯ ಇದುವರೆಗೆ ಹೇಳಿದ್ದೆಲ್ಲವೂ ಉಲ್ಟಾ ಆಗಿದೆ. ಅವರ ಬಾಯಲ್ಲಿ ಉಲ್ಟಾ ಮಚ್ಚೆಯಿದೆ ಎಂದು ಅಪಹಾಸ್ಯ ಮಾಡಿದರು.
ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸಿದ್ದರಾಮಯ್ಯ ಅವರೇನು ಕಾಲಜ್ಞಾನಿಯಾ? ಒಮ್ಮೆ ಅಪ್ಪನಾಣೆ ನರೇಂದ್ರ ಮೋದಿ ಪ್ರಧಾನಿಯವರು ಆಗಲ್ಲ ಎಂದು ಹೇಳಿದ್ದರು. ಆದರೆ ಮೋದಿ ಎರಡು ಬಾರಿ ಪ್ರಧಾನಿಯಾದರು. 2018ರಲ್ಲಿ ತಾವು ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇನೆ ಎಂದಿದ್ದರು. ಅವರು ಏನು ಹೇಳುತ್ತಾರೋ ಅದಕ್ಕೆ ತದ್ವಿರುದ್ಧವಾಗಿ ಆಗುತ್ತದೆ ಎಂದರು.
ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅಂದರೆ ನೂರಕ್ಕೆ ನೂರು ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಬಿಜೆಪಿ ಉಳಿಯಲ್ಲ ಅಂದರೆ, ಈ ಅವಧಿ ಮುಗಿಸಿ ಮತ್ತೆ ಮುಂದಿನ ಐದು ವರ್ಷಕ್ಕೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಕೆಲವರು ಹೇಳಿದ್ದು ನಡೆಯುತ್ತದೆ ಎನ್ನಲು ಅವರ ಮಚ್ಚೆ ಇರುತ್ತದೆ ಎನ್ನುವ ಮಾತಿದೆ. ಸಿದ್ದರಾಮಯ್ಯ ಅವರ ಬಾಯಲ್ಲಿ ಉಲ್ಟಾ ಮಚ್ಚೆ ಇದೆ ವ್ಯಂಗ್ಯವಾಡಿದರು.




