Breaking Newsಕಲಬುರ್ಗಿಜಿಲ್ಲಾ ಸುದ್ದಿ
ನಾಡಬಂದೂಕು ಸಿಡಿಸಿ ಕೇಂದ್ರ ಸಚಿವರಿಗೆ ಸ್ವಾಗತ ಪ್ರಕರಣ: ಮೂವರು ಕಾನ್ಸ್ ಸ್ಟೇಬಲ್ ಅಮಾನತು

ಯಾದಗಿರಿ: ನಾಡ ಬಂದೂಕು ಸಿಡಿಸಿ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸಿದ ಪ್ರಕರಣಕ್ಕೆ ಸಂಭಂದಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಮೂವರು ಪೊಲೀಸ ಕಾನ್ಸ್ ಸ್ಟೇಬಲ್ಗಳನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.
ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯ ವಿರೇಶ್, ಸಂತೋಷ ಹಾಗೂ ಮೈಬೂಬ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಡಾ.ವೇದಮೂರ್ತಿ ಮಾಹಿತಿ ನೀಡಿದ್ದಾರೆ.
ನಿನ್ನೆ ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆಯೊಂದಿಗೆ ಯರಗೋಳ ಗ್ರಾಮಕ್ಕೆ ಆಗಮಿಸಿದಾಗ ನಾಡಬಂದೂಕು ಸಿಡಿಸಿ ಸ್ವಾಗತ ಮಾಡಲಾಗಿತ್ತು. ಅಲ್ಲದೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣ ಕೂಡಾ ದಾಖಲಾಗಿದೆ.
