ಬೆಳಗಾವಿ
ಮೀಸಲಾತಿ: ಬೊಮ್ಮಾಯಿ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ ಎಂದ ಸತೀಶ್ ಜಾರಕಿಹೊಳಿ

ಬೆಳಗಾವಿ: ಬಹುದಿನಗಳ ಬೇಡಿಕೆಯಾದ ಪರಿಶಿಷ್ಟ ಪಂಗಡಗಳಿಗೆ 7.5ರಷ್ಟು ಮೀಸಲಾತಿ ನೀಡಬೇಕೆಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡದ್ದೇವೆ. ಅವರು ಈ ಕುರಿತು ಸಕಾರಾತ್ಮಕವಾಗಿ ಸ್ಪಂದನೆ ಮಾಡುತ್ತಾರೆಂಬ ಆಶಾಭಾವನೆ ಇದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದರು.
ಸುದ್ದಿಗಾರರೊಂದಿಗೆ ಈ ಕುರಿತು ಮಾತ್ನಾಡಿದ ಸತೀಶ್ ಜಾರಕಿಹೊಳಿಯವರು, ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ನೀಡಬೇಕೆಂಬದು ನಮ್ಮ ಬಹು ದಿನಗಳ ಬೇಡಿಕೆ. ಬೊಮ್ಮಾಯಿ ಅವರು ಈ ದಿಸೆಯಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಬಹುದು ಎಂಬ ನೀರಿಕ್ಷೆ ಇದೆ. ಆದರೆ ಅವರು ಹೊಸಬರು. ಅವರಿಗೂ ಸಮಯಾವಕಾಶ ಬೇಕು ಎಂದು ತಿಳಿಸಿದರು.
ಇದೇ ವೇಳೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಚಿಹ್ನೆಯ ಮೇಲೆ ಚುನಾವಣೆ ಮಾಡುತ್ತೀರ ಎಂಬ ಪ್ರಶ್ನೆಗೆ, ಬೆಳಗಾವಿಯ ಸಮಿತಿಯ ಮುಂದೆ ಚರ್ಚೆ ಮಾಡಿ ಈ ಬಗಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು




