ಬೆಳಗಾವಿ

ಪಕ್ಷದ ಚಿಹ್ನೆ ಮೇಲೆ ಪಾಲಿಕೆ ಚುನಾವಣೆ; ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಗೋಕಾಕ: ಕಾಂಗ್ರೆಸ್ ಪಕ್ಷ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯನ್ನು ಪಕ್ಷದ ಚಿಹ್ನೆಯ ಮೇಲೆ ಎದುರಿಸಲಿದ್ದಾರೋ, ಇಲ್ಲವೋ ಎಂಬ ಗೊಂದಲಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತೆರೆ ಎಳೆದಿದ್ದಾರೆ.

ಮಹಾನಗರ ಪಾಲಿಕೆ ಚುನಾವಣೆ ದಿನಾಂಕ ಘೋಷಣೆಯಾದ ಬಳಿಕ ಅಭ್ಯರ್ಥಿಗಳು ಹಾಗೂ ಮುಖಂಡರಲ್ಲಿ ಗೊಂದಲ ಶುರುವಾಗಿತ್ತು. ಈ ಬಗ್ಗೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ನಾಯಕರು ಸಭೆಯನ್ನು ಕೂಡಾ ನಡೆಸುವ ಮೂಲಕ ಸುದೀರ್ಘ ಚರ್ಚೆಯನ್ನು ನಡೆಸಿದ್ದರು. ಈಗ ಪಕ್ಷದ ಚಿಹ್ನೆ ಮೇಲೆ ಪಾಲಿಕೆ ಚುನಾವಣೆ ನಡೆಯುವುದಾಗಿ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಗೋಕಾಕನ ಹಿಲ್ ಗಾರ್ಡ್ ಕಚೇರಿಯಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷದ ಚಿಹ್ನೆಯ ಮೇಲೆ ನಡೆಸುವುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ. ನಾಳೆ ಸಂಜೆಯೊಳಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಎಂ.ಬಿ.ಪಾಟೀಲ, ಎಲ್ ಹನುಮಂತಯ್ಯ, ನಾಸೀರ್ ಹುಷೇನ್ ನೇತೃತ್ವದಲ್ಲಿ ಇತ್ತಿಚೇಗೆ ಶಾಸಕರು , ಮಾಜಿ ಶಾಸಕರು, ಸ್ಥಳೀಯ ಮುಖಂಡರ ಜೊತೆ ಚರ್ಚಿಸಿ, ಅಭಿಪ್ರಾಯ ಸಂಗ್ರಹಿಸಿ ಪಕ್ಷದ ವರಿಷ್ಠರಿಗೆ ಕಳಿಸಲಾಗಿತ್ತು. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಪಕ್ಷದ ಚಿಹ್ನೆ ಮೇಲೆ ಚುನಾವಣೆ ಎದುರಿಸಲು ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.

ಮುಖ್ಯಮಂತ್ರಿ ಮೇಲೆ ನಿರೀಕ್ಷೆ : ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಇಲ್ಲಿಯವರೆಗೂ ಪೂರ್ಣ ಪ್ರಮಾಣದ ಪರಿಹಾರ ದೊರೆತಿಲ್ಲ. ಕಳೆದ ವರ್ಷದ ನೆರೆ ಸಂತ್ರಸ್ತರಿಗೆ ಸಿಕ್ಕಿಲ್ಲ. ಈ ಬಾರಿಯೂ ಸಹ ಮನೆ ಕಳೆದುಕೊಂಡವರಿಗೆ ಪರಿಹಾರ ದೊರೆತಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನೆರೆ ಪರಿಹಾರ ನೀಡಲಿದ್ದಾರೆ ಎಂಬ ನಿರೀಕ್ಷೆ ಇದೆ. ನೆರೆ ಹಾನಿ, ರೈತರ ಬೆಳೆ ಹಾನಿ ಪರಿಹಾರ ಕ್ರಮಗಳ ಬಗ್ಗೆ ಇಂದು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಲಿದ್ದು, ಈ ವೇಲೆ ಪರಿಹಾರದ ದೊರೆಯದೆ ಇರುವುದರ ಬಗ್ಗೆ ಸಿಎಂ ಗಮನಕ್ಕೆ ತರಲಾಗುತ್ತದೆ ಎಂದರು.

Spread the love

Related Articles

Leave a Reply

Your email address will not be published. Required fields are marked *

Back to top button