Breaking NewsLatestರಾಷ್ಟ್ರೀಯಸುದ್ದಿ

Kalyan Singh: ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ ಸಿಂಗ್​​​ ನಿಧನ

ನವದೆಹಲಿ : ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ (89) ಲಖನೌನ ಪಿಜಿಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಕಲ್ಯಾಣ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸೇರಿದಂತೆ ಹಲವು ನಾಯಕರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.‌ ಕಲ್ಯಾಣ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಇತರರಿಗೆ ಅನುಕರಣೀಯವಾಗಿವೆ. ರಾಜ್ಯಪಾಲರಾಗಿಯೂ ಅವರು ಸೇವೆಯನ್ನು ಸಲ್ಲಿಸಿದ್ದಾರೆ. ಅಂಥ ಮೇಧಾವಿ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದೇವೆ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಆ ಭಗವಂತನಲ್ಲಿ ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.

ಕಲ್ಯಾಣ್ ಸಿಂಗ್ ಅವರು ಹಲವು ತಿಂಗಳುಗಳಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಎಸ್‌ಜಿಪಿಜಿಐ) ಕಳೆದ 51 ದಿನಗಳ ಹಿಂದೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button