Breaking NewsLatestಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ
ಹುಬ್ಬಳ್ಳಿಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸ್ವಾಗತಿಸಿದ ಸಿಎಂ ಬೊಮ್ಮಾಯಿ

ಧಾರವಾಡ : ಜಯನಗರ ಜಿಲ್ಲೆ ಹೊಸಪೇಟೆಯ ತುಂಗಭದ್ರಾ ಜಲಾಶಯ ಮತ್ತು ಐತಿಹಾಸಿಕ ಹಂಪಿ ಪ್ರವಾಸ ಮುಗಿಸಿಕೊಂಡು ಉಪರಾಷ್ಟ್ರಪತಿಗಳು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿಮಾನ ನಿಲ್ದಾಣಕ್ಕೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಪರಾಷ್ಟ್ರಪತಿ ಎಂ. ಎಂ.ವೆಂಕಯ್ಯನಾಯ್ಡು ಅವರನ್ನು ಸ್ವಾಗತಿಸಿದರು.
ಹೊಸಪೇಟೆ ಹಾಗೂ ಹಂಪಿ ಪ್ರವಾಸಕ್ಕೆ ತೆರಳಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಹಾಗೂ ಪತ್ನಿ ಉಷಾ ಅವರು ಭಾರತೀಯ ವಾಯುಸೇನೆಯ ವಿಶೇಷ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಬಳಿಕ ವಿಮಾನ ನಿಲ್ದಾಣದಿಂದ ಗೋಕುಲ್ ರೋಡ್ ಖಾಸಗಿ ಹೋಟೆಲಗೆ ತೆರಳಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರ ಸಹೋದರ ಮಗನ ಮದುವೆ ಸಮಾರಂಭದಲ್ಲಿ ಭಾಗವಹಿಸಿ ನವ ಜೋಡಿಗಳಿಗೆ ಶುಭ ಕೋರಿದರು.

ಬಳಿಕ ನೇರವಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಉಪರಾಷ್ಟ್ರತಿಗಳು ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ದೆಹಲಿಗೆ ಕಡೆಗೆ ಪ್ರಾಯಣ ಬೆಳೆಸಿದರು.
