Breaking NewsLatestರಾಜ್ಯಸುದ್ದಿ

ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ತರಗತಿ ನಡೆಸಲು ಅಗತ್ಯ ಕ್ರಮ‌ ಕೈಗೊಳ್ಳಲಾಗಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ 9 ರಿಂದ 12 ನೇ ತರಗತಿಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಸಂತೋಷದಿಂದ ಶಾಲೆಗೆ ಹಾಜರಾಗಿದ್ದಾರೆ. ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ತರಗತಿ ನಡೆಸಲು ಅಗತ್ಯ ಕ್ರಮ‌ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ವಿದ್ಯಾರ್ಥಿಗಳು ಮುಕ್ತ ಸಂವಾದ ನಡೆಸಿ ಶಾಲೆಗೆ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ ಎಂದರು.

ಮಕ್ಕಳಿಗೆ ಕೋವಿಡ್ ನಿಂದ ಸ್ವತ‌ಂತ್ರ ಸಿಕ್ಕಿದೆ. ಸರ್ಕಾರ ಈ ಬಗ್ಗೆ ನಿಗಾವಹಿಸಲಿದೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ಬಂದ ಕೂಡಲೇ ಹಂತ ಹಂತವಾಗಿ ಶಾಲೆ ಆರಂಭಿಸಲಾಗುವುದು ಎಂದು ತಿಳಿಸಿದರು.

1 ರಿಂದ 8 ನೇ ತರಗತಿ ಪ್ರಾರಂಭ ಸಂಬಂಧ ತಜ್ಞರ ಸಮಿತಿ ಈ ತಿಂಗಳಾಂತ್ಯಕ್ಕೆ ವರದಿ ನೀಡಲಿದ್ದು ಅದರ ಪ್ರಕಾರ ಮುಂದಿನ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

Related Articles

Leave a Reply

Your email address will not be published. Required fields are marked *

Back to top button