Breaking NewsLatest

ಮಹಾನಗರ ಪಾಲಿಕೆ ಚುನಾವಣಾ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಕಲಬುರಗಿ: ಅಳೆದು ತೂಗಿ ಕೊನೆಗೂ ಬಿಜೆಪಿ ಪಕ್ಷ ತನ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಹಾನಗರ ಪಾಲಿಕೆ ಚುನಾವಣಾ ಉಸ್ತುವಾರಿ ಎನ್ ರವಿಕುಮಾರ್ ಅವರು ಭಾರತಿಯ ಜನತಾ ಪಾರ್ಟಿಯ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ.

ಮಹಾನಗರ ಪಾಲಿಕೆ ಚುನಾವಣೆ ನಾಮಪತ್ರ ಸಲ್ಲಿಕೆ ಇಂದು ಕೊನೆಯ ದಿನವಾಗಿದ್ದು ಕಲ್ಬುರ್ಗಿ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು ಕೊನೆಗೂ ಬಿಜೆಪಿ ನಾಯಕರು ಅಳೆದು ತೂಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಬಿಜೆಪಿಯ 52 ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು ಇನ್ನು ಮೂವರ ಹೆಸರನ್ನು ಅಂತಿಮಗೊಳಿಸಲಾಗಿಲ್ಲ.

ಇನ್ನು ಅಭ್ಯರ್ಥಿಗಳನ್ನು ಘೋಷಣೆ ಮಾಡದ ಕಾಂಗ್ರೆಸ್

ಬಿಜೆಪಿ ತಮ್ಮ ಪಟ್ಟಿಯನ್ನು ಪಟ್ಟಿ ರಿಲೀಸ್ ಮಾಡಿದೆ. ಆದರೆ, ಕಾಂಗ್ರೆಸ್ ಪಕ್ಷದವರು ಇಲ್ಲಿವರೆಗೆ ಕೂಡ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿರುವ ಕಾರಣ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಘೋಷಣೆಯಲ್ಲಿ ವಿಳಂಬ ಮಾಡುತ್ತಿದೆ ಎನ್ನಲಾಗುತ್ತಿದೆ. ಇನ್ನು ನಾಮಪತ್ರ ಸಲ್ಲಿಕೆ ಇಂದು ಕೊನೆಯ ದಿನವಾಗಿದ್ದು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಕೂಡ ಮಧ್ಯಾಹ್ನದ ವರೆಗೆ ಪಟ್ಟಿ ಬಿಡುಗಡೆ ‌ಮಾಡಬಹುದು.

Spread the love

Related Articles

Leave a Reply

Your email address will not be published. Required fields are marked *

Back to top button