Breaking NewsLatestಜಿಲ್ಲಾ ಸುದ್ದಿರಾಜಕೀಯಹುಬ್ಬಳ್ಳಿ - ಧಾರವಾಡ

ರಾಜ್ಯದ ನಾಲ್ಕು ಭಾಗಗಳಿಂದ ಪಾದಯಾತ್ರೆಗೆ ಜೆಡಿಎಸ್ ನಿರ್ಧಾರ: ಹೆಚ್ ಡಿ ಕುಮಾರಸ್ವಾಮಿ

ಧಾರವಾಡ: ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿವೆ. ತಮ್ಮದೆಯಾದ ಕಾರ್ಯತಂತ್ರದೊಂದಿಗೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಮತದಾರರನ್ನು ಸೆಳೆಯುಲು ಮುಂದಾಗುತ್ತಿವೆ. ಇದರ ಮಧ್ಯೆ ಈಗ ಜೆಡಿಎಸ್ ಪಕ್ಷವು ಮುಂಬರುವ ವಿಧಾನ ಸಭಾ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಅಖಾಡಕ್ಕೆ ಇಳಿಯಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಸೈಲೆಂಟ್ ಆಗಿಯೇ ಪಾದಯಾತ್ರೆಯ ರೂಪ ರೇಷಗಳನ್ನು ಸಿದ್ಧಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರು ಪದಾಯತ್ರೆ ಸೇರಿದಂತೆ, ಹೋರಾಟಗಳ ಮೂಲಕ ಪಕ್ಷವನ್ನು ಬಲಪಡಿಸಿ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಪ್ಲ್ಯಾನ್ ಮಾಡಿದ್ದಾರೆ.

ಹುಬ್ಬಳ್ಳಿ ಖಾಸಗಿ ಹೋಟೆಲ್‌ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಇದರ‌ ಕುರಿತು ಸುಳಿವು ಬಿಟ್ಟುಕೊಟ್ಟಿದ್ದಾರೆ. ರಾಜ್ಯಕ್ಕೆ ಕೇಂದ್ರ ಸರ್ಕಾರ ನೀರಾವರಿ ಯೋಜನೆಗಳಲ್ಲಿ‌ ಪದೇ ಪದೇ ಅನ್ಯಾಯ ಮಾಡುತ್ತಲೇ ‌ಬರುತ್ತಿದೆ. ಹಾಗಾಗಿ ‌ಈಗ‌ ರಾಜ್ಯದ ಪ್ರಬಲ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್ ಇದರ ಕುರಿತು ಹೋರಾಟದ ರೂಪ ರೇಷಗಳನ್ನು ಸಿದ್ಧ ಪಡೆಸುತ್ತಿದ್ದು, ಸದ್ಯದಲ್ಲೇ ಪಾದಯಾತ್ರೆಯ ಮೂಲಕ ಹೋರಾಟ ನಡೆಸುತ್ತೆವೆ ಎಂದು ಹೇಳಿಕೊಂಡಿದ್ದಾರೆ.

ಪ್ರತಿಭಟನೆಗೆ ಸಿದ್ಧವಾದ ಜೆಡಿಎಸ್

ನೀರಾವರಿ ಯೋಜನೆಗಳ ವಿಷಯದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಲೇ ಬರುತ್ತಿದೆ ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿಯವರು, ಈಗ ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾಗುತ್ತಿದ್ದಾರೆ. ಅಲ್ಲದೆ ಇದರಲ್ಲಿ ಒಂದೇ ಕಲ್ಲಿನಿಂದ ಎರಡು ಹಕ್ಕಿ ಹೊಡೆಯುವ ತಂತ್ರವನ್ನು ಕುಮಾರಸ್ವಾಮಿಯರು ಮಾಡಿರುವುದು ಸ್ಪಷ್ಟವಾಗಿ ಎದ್ದು ಕಾಣುತ್ತದೆ. ಒಂದು ಕೇಂದ್ರ ಸರ್ಕಾರ ವಿರುದ್ಧ ಹೋರಾಟವಾದ್ರೆ, ಇನ್ನೊಂದು ಪಾದಯಾತ್ರೆಯ ಮೂಲಕ ಪಕ್ಷ ಸಂಘಟನೆ ರೂಪಿಸುವುದು ಇದರ ಮುಖ್ಯ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.

ಉತ್ತರ ಕರ್ನಾಟಕ ಭಾಗದ ಜನರ ಬಹು ಬೇಡಿಕೆಯಾಗಿರುವ ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಿಂದ, ಕೃಷ್ಣಾ ಯೋಜನೆ ಕುರಿತು ಆಲಮಟ್ಟಿ, ಮೇಕೆದಾಟುಗಾಗಿ ತಲಕಾವೇರಿ ಹಾಗೂ ಎತ್ತಿನಹೊಳೆಗಾಗಿ ಸಕಲೇಶಪುರದಿಂದ ಪಾದಯಾತ್ರೆಯನ್ನು ಸದ್ಯದಲ್ಲೇ ನಡೆಸಲಾಗುವುದು ಎಂದು ಕುಮಾರಸ್ವಾಮಿಯವರು ಗುಟ್ಟು ಬಿಟ್ಟು ಕೊಟ್ಟಿದ್ದಾರೆ.

ವಿಜಯ ದಶಮಿಯಂದೇ ಹೋರಾಟಕ್ಕೆ ಇಳಿಯುತ್ತಾ ಜೆಡಿಎಸ್..?

2023 ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಜೆಡಿಎಸ್‌ ಪಕ್ಷ ಈಗ ಹೋರಾಟದ ಮೂಲಕ ಪಕ್ಷ ಸಂಘಟನೆಗೆ ಮುಂದಾಗಿದ್ದು, ಇದರ ಮೊದಲ ಭಾಗವಾಗಿ ನೀರವಾರಿ ಯೋಜನೆ ಹಾಗೂ ರಾಜ್ಯಕ್ಕೆ ಅನುದಾನ ನೀಡುವಲ್ಲಿ ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಅಸ್ತ್ರವಾಗಿ ಬಳಸಿಕೊಳ್ಳಲು ಮುಂದಾಗಿದೆ. ಅದರ ಮೊದಲ‌ ಹೆಜ್ಜೆಯಾಗಿ ರಾಜ್ಯದಲ್ಲಿ ನೀರಾವರಿ ಯೋಜನೆಗೆ ಕೇಂದ್ರ ಸರ್ಕಾರ ತೋರುತ್ತಿರುವ ಅಸಹಕಾರವನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡುತ್ತದೆ. ಈಗಾಗಲೇ ಅದರ ಕುರಿತು ಕಾರ್ಯಗಳ ಆರಂಭಿಸಿದ್ದೇವೆ ಎಂದು ಕುಮಾರಸ್ವಾಮಿಯವರು ಹೇಳಿಕೊಂಡಿದ್ದಾರೆ. ಅಲ್ಲದೆ ಒಂದು ವೇಳೆ ಕೊರೊನಾ ವೈರಸ್ ಹರಡುವಿಕೆ ಕಡೆಯಾದ ಪಕ್ಷದಲ್ಲಿ ವಿಜಯ ದಶಮಿಯಂದು, ನೀರಾವರಿ ಯೋಜನೆಯಲ್ಲಿ ಕೇಂದ್ರ ಸರ್ಕಾರದ ಇಬ್ಬಗೆಯ ನೀತಿ ನೀತಿಯನ್ನು ಖಂಡಿಸಿ ಪಾದಯಾತ್ರೆಯನ್ನು ಕೈಗೊಳ್ಳುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ.

ಈಗಾಗಲೇ ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು 2023 ವಿಧಾನ ಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಅಖಾಡಕ್ಕೆ ಇಳಿದಿದ್ದು, ರಾಜ್ಯದ ತುಂಬಾ ಕಾಂಗ್ರೆಸ್ ಬಿಜೆಪಿಯ ಪ್ರಮುಖ ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡಲು ಆರಂಭಿಸಿದ್ದಾರೆ. ಇವರ ಜೊತೆಗೆ ಈಗ ರಾಜ್ಯದ ಪ್ರಬಲ ಪ್ರಾದೇಶಿಕ ಪಕ್ಷವಾಗಿರುವ ಜೆಡಿಎಸ್‌ಪಕ್ಷ ಕೂಡಾ ಈಗ ಅಖಾಡಕ್ಕೆ ಇಳಿಯುವ ಮುನ್ಸೂಚನೆ ನೀಡಿದೆ. ಆದರೆ ಇದರಲ್ಲಿ ಎಷ್ಟರ ಮಟ್ಟಿಗೆ ಮಾಜಿ ಸಿಎಂ ಕುಮಾರಸ್ವಾಮಿಯವರು ಯಶಸ್ವಿಯಾಗುತ್ತಾರೆ ಎಂಬುವುದನ್ನು ಕಾಲವೆ ಉತ್ತರಿಸಬೇಕಿದೆ.

Spread the love

Related Articles

Leave a Reply

Your email address will not be published. Required fields are marked *

Back to top button