Breaking NewsLatestಜಿಲ್ಲಾ ಸುದ್ದಿರಾಜಕೀಯರಾಮನಗರ

ಪೋಲೀಸ್ ವೈಫಲ್ಯದಿಂದಲೇ ಗ್ಯಾಂಗ್​​ ರೇಪ್​​​ ನಡೆದಿದೆ: ಹೆಚ್ ಡಿ ಕುಮಾರಸ್ವಾಮಿ

ರಾಮನಗರ: ಮೈಸೂರು ಗ್ಯಾಂಗ್ ರೇಪ್ ಸಂಬಂದ ನಾನು ನೆನ್ನೆಯಿಂದ ಕಾಂಗ್ರೆಸ್- ಬಿಜೆಪಿ ನಾಯಕರ ಪ್ರತಿಕ್ರಿಯೆಗಳನ್ನು ಗಮನಿಸುತ್ತಿದ್ದೇನೆ. ಅದರ ಬಗ್ಗೆ ಪರ-ವಿರೋಧ ಚಟುವಟಿಕೆ ಗಮನಿಸಿದ್ದೇನೆ. ಮೈಸೂರಿನಲ್ಲಿ ಇಂತಹದ್ದೊಂದು ಅಮಾನವೀಯ ಕೃತ್ಯ ನಡೆಯಬಾರದಿತ್ತು. ಪೋಲೀಸ್ ವೈಪಲ್ಯದಿಂದಲೇ ಈ ಕೃತ್ಯ ನಡೆದಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಗೆ ಸರ್ಕಾರದ ವೈಫಲ್ಯವೇ ಮೊದಲ ಕಾರಣ. ಪೊಲೀಸ್ ಇಲಾಖೆ ಅಮಾಯಕರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಸಾರ್ವಜನಿಕವಾಗಿ ಮದ್ಯಪಾನಕ್ಕೆ ಅವಕಾಶ ಕೊಟ್ಟಿದ್ದೇ ತಪ್ಪು ಎಂದರು.

ಹಳ್ಳಿ, ಹಳ್ಳಿಗಳಲ್ಲಿ ಮಟ್ಕಾ ದಂಧೆಗಳು ನಡೆಯುತ್ತಿವೆ. ಸರ್ಕಾರ ಸಾರ್ವಜನಿಕವಾಗಿ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಕೊಡಬಾರದು. ಉತ್ತರ ಪ್ರದೇಶ, ದೆಹಲಿಯಲ್ಲಿ ನಡೆದಂತಹ ಘಟನೆಗಳು ನಮ್ಮ ರಾಜ್ಯದಲ್ಲಿ ನಡೆಯುತ್ತಿವೆ. ದೇಶದ ಆಡಳಿತ ವ್ಯವಸ್ಥೆಯಲ್ಲಿ ಇಂತಹ ಘಟನೆಗಳಿಗೆ ಸೂಕ್ತ ಕಠಿಣ ಕ್ರಮ ತೆಗೆದುಕೊಳ್ಳಬೇಕು.ಇನ್ನು ಗೃಹ ಇಲಾಖೆ ಒಂದು ಸೂಕ್ಷ್ಮವಾದ ಇಲಾಖೆಯಾಗಿದೆ. ಈ ವಿಷಯದಲ್ಲಿ ಪೊಲೀಸ್ ಇಲಾಖೆ ಸಮರ್ಥವಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಇನ್ನು ಚಾಮುಂಡೇಶ್ವರಿ ಶಾಸಕ ಜಿಟಿಡಿ ಜಿಡಿಎಸ್ ತೊರೆದು ಕಾಂಗ್ರೆಸ್ ಸೇರುವುದರಿಂದ ಮೈಸೂರು ಭಾಗದಲ್ಲಿ ಜೆಡಿಎಸ್‌ಗೆ ಹಿನ್ನಡೆ ಆಗುತ್ತದೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಅವರು 2008 ರಲ್ಲಿ ಒಂದು ಕಾರಣ ಹೇಳಿಕೊಂಡು ಹೋಗಿದ್ದರು. ಇವಾಗ ಒಂದು ಕಾರಣ ಹೇಳಿಕೊಂಡು ಹೋಗ್ತಿದ್ದಾರೆ. ನಾನು ಕಳೆದ ಎರಡು ದಿನಗಳಿಂದ ಉತ್ತರ ಕರ್ನಾಟಕ ಪ್ರವಾಸ ಮಾಡಿದ್ದೇನೆ. ಆ ಬಗ್ಗೆ ಹಚ್ಚಿನದಾಗಿ ಏನು ಮಾತನಾಡುವುದಿಲ್ಲ ಎಂದರು.

ಇನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದಗಳ ವಿರುದ್ಧ ಅಸಮಾಧಾನ ವ್ಯಕ್ಯಪಡಿಸಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳ ಆಡಳಿತದಿಂದ ಜನತೆ ಬೇಸತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೆ ಬರಲಿದೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button