ಮೈಸೂರು ಅತ್ಯಾಚಾರ ಪ್ರಕರಣ; ದೇವನಹಳ್ಳಿಯಲ್ಲಿ ಪ್ರತಿಭಟನೆ

ದೇವನಹಳ್ಳಿ: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ಪ್ರಜಾ ವಿಮೋಚನಾ ಚಳವಳಿಯ ಕಾರ್ಯಕರ್ತರು ಶನಿವಾರ ದೇವನಹಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು
ದೇವನಹಳ್ಳಿಯ ಪ್ರವಾಸಿ ಮಂದಿರದಿಂದ ಪೋಲಿಸ್ ಠಾಣೆಯ ವರೆಗೆ ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು ಪೋಲಿಸ್ ಠಾಣೆಯ ಆವರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ ‘ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ’ ಎಂದು ಘೋಷಣೆ ಕೂಗಿದರು.
ಪ್ರಜಾವಿಮೋಚನಾ ಚಳವಳಿಯ ರಾಜ್ಯಾದ್ಯಕ್ಷ ಮುನಿಆಂಜನಪ್ಪ ಮಾತನಾಡಿ, ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವೇ ತಲೆತಗ್ಗಿಸುವಂತಹ ಘಟನೆಯಾಗಿದೆ. ಚಾಮುಂಡಿ ಬೆಟ್ಟದ ತಪ್ಪಲಲ್ಲಿ ನಡೆದಿರುವ ಈ ಪೈಶಾಚಿಕ ಕೃತ್ಯದಿಂದ ಮೈಸೂರು ಪೋಲಿಸ್ ಇಲಾಖೆ ಕರ್ತವ್ಯ ನಿಷ್ಠೆಯ ಬಗ್ಗೆ ಅನುಮಾನ ಮೂಡುತ್ತಿದೆ. ಇಂತಹ ಸೂಕ್ಷ್ಮ ಪರಿಸ್ಥಿತಿಯಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಾದ ಗೃಹ ಸಚಿವರು ನೊಂದ ವಿದ್ಯಾರ್ಥಿನಿಗೆ ಸಾಂತ್ವನ ಹೇಳುವ ಬದಲು ವಿಧ್ಯಾರ್ಥಿನಿ ಮನೆಯಿಂದ ಹೊರಗೆ ಹೋಗಿದ್ದೆ ತಪ್ಪು ಎಂದು ಹೇಳಿ ಮಹಿಳೆಯರ ಬಗ್ಗೆ ಅಗೌರವ ತೋರಿದ್ದಾರೆ, ಇದು ಖಂಡನೀಯ ನೊಂದ ವಿದ್ಯಾರ್ಥಿನಿಗೆ ನ್ಯಾಯಕೊಡಿಸುವಲ್ಲಿ ಸರ್ಕಾರ ವಿಫಲವಾಗಿದೆ. ಎಂದು ಆಕ್ರೋಶ ವ್ಯಕ್ತಪಡಿಸಿ ಪ್ರಕರಣದ ಬಗ್ಗೆ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಆರೋಪಿಗಳಿಗೆ ಶೀಘ್ರವಾಗಿ ಶಿಕ್ಷೆಗೆ ಗುರಿಪಡಿಸಬೇಕಿದೆ, ಎಂದು ಆಗ್ರಹಿಸಿದರು.
ಈ ಘಟನೆಯಿಂದ ವಿದ್ಯಾರ್ಥಿನಿಯರು, ಮತ್ತು ಅವರ ಪೋಷಕರಲ್ಲಿ ಭಯದ ವಾತಾವರಣ ಉಂಟಾಗಿದೆ. ದೂರದ ಉತ್ತರ ಪ್ರದೇಶಗಳಲ್ಲಿ ಕೇಳಿ ಬರುತ್ತಿದ್ದ ಇಂತಹ ಹೇಯ ಕೃತ್ಯಗಳು ಈಗ ರಾಜ್ಯದಲ್ಲಿಯೂ ನಡೆಯುತ್ತಿರುವುದು ಖಂಡನೀಯ ವಿದ್ಯಾಭ್ಯಾಸಕ್ಕಾಗಿ ದೇಶದ ಹೊರ ರಾಜ್ಯಗಳಿಂದಲೂ ಸಾವಿರಾರು ವಿದ್ಯಾರ್ಥಿನಿಯರು ಮೈಸೂರಿಗೆ ಬರುತ್ತಾರೆ. ಇಂತಹ ಘಟನೆಗಳು ನಡೆದರೆ ವಿದ್ಯಾರ್ಥಿನಿಯರು ವಿದ್ಯಾಭ್ಯಾಸಕ್ಕೆ ರಾಜ್ಯಕ್ಕೆ ಬರುವುದು ಹೇಗೆ? ಎಂದು ಕಾಕೋಳು ಚನ್ನಮರಿಯಪ್ಪ ಆಕ್ರೋಶ ಪ್ರಶ್ನಿಸಿದರು.
ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಪ್ರಕರಣವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಆರೋಪಿಗಳನ್ನು ಶೀಘ್ರವಾಗಿ ಶಿಕ್ಷೆಗೆ ಒಳಪಡಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಹನುಮಣ್ಣ ಗೂಳ್ಯ, ಅಯೂಬ್ ಖಾನ್, ಶ್ರೀಮತಿ ವಸಂತಮ್ಮ, ಪುನೀತ್ ತಳಗವಾರ ಮತ್ತು ನೂರಾರು ಜನ ಪ್ರಜಾ ವಿಮೋಚನ ಚಳವಳಿಯ ಪದಾಧಿಕಾರಿಗಳು ಕಾರ್ಯಕರ್ತರು ಇದ್ದರು.
