ರಾಷ್ಟ್ರೀಯ
ಬ್ಲಾಕ್ ಫಂಗಸ್ ಸೋಂಕು; ಕೇಂದ್ರಕ್ಕೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲ್ಯಾಕ್‌ಫಂಗಸ್ ಸೋಂಕಿಗೆ ಪೂರಕ ಚಿಕಿತ್ಸೆಯನ್ನು ನೀಡಲಾಗುತ್ತಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಅವರು, ಸೋಂಕಿತರಿಗೆ ಸೂಕ್ತ ಚಿಕಿತ್ಸೆಯನ್ನು ನೀಡದ ಪರಿಣಾಮವಾಗಿ ರೋಗಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದಿದ್ದಾರೆ.
ಈ ಸಂಬಂಧ ಅವರು ಟ್ವೀಟ್ಟರ್‌ನಲ್ಲಿ ಸರ್ಕಾರಕ್ಕೆ ಮೂರು ಪ್ರಶ್ನೆಗಳನ್ನು ಕೇಳಿದ್ದಾರೆ. ಬ್ಲ್ಯಾಕ್ ಫಂಗಸ್ ರೋಗದ ಪರಿಸ್ಥಿತಿಯ ಬಗ್ಗೆ ಸರ್ಕಾರ ಸ್ಪಷ್ಟನೆಯನ್ನು ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಆಂಫೊಟೆರಿಸಿನ್ ಬಿ ಕೊರತೆಯಾಗಿರುವ ಬಗ್ಗೆ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಮತ್ತು ಈ ಸೋಂಕಿಗೆ ಒಳಗಾದ ರೋಗಿಗಳಿಗೆ ನೀಡಲಾಗುತ್ತಿರುವ ಔಷಧಿಯ ವಿಧಾನ ಯಾವುದು ಎಂದು ಅವರು ಕೆಳಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರ ಔಪಚಾರಿಕತೆಯನ್ನಷ್ಟೇ ಮಾಡುತ್ತಿದ್ದು ಸೂಕ್ತ ಚಿಕಿತ್ಸೆಯನ್ನು ಯಾವ ಕಾರಣಕ್ಕೆ ನೀಡುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.




