ಜಿಲ್ಲಾ ಸುದ್ದಿಯಾದಗಿರಿ

ಮಹಿಳೆಯೊಂದಿಗೆ ಅನೈತಿಕ ಸಂಬಂಧ; ಪೊಲೀಸ್ ಪೇದೆಗೆ ಹಿಗ್ಗಾಮುಗ್ಗಾ ಥಳಿತ

ಯಾದಗಿರಿ: ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪೊಲೀಸ್ ಪೇದೆಯನ್ನ ರೆಡ್ ಹ್ಯಾಂಡ್ ಆಗಿ ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಗುರಪ್ಪ ಥಳಿತಕ್ಕೊಳಗಾದ ಪೊಲೀಸ್ ಪೇದೆ. ಕಳೆದ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆ ಮನೆಗೆ ಬಂದ ಪೇದೆ ಗುರಪ್ಪ ಮಹಿಳೆಯೊಂದಿಗೆ ರೆಡ್ ಹ್ಯಾಂಡ್ ಆಗಿ ಕುಟುಂಬಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಇದ್ರಿಂದ ರೊಚ್ಚಿಗೆದ್ದ ಮಹಿಳೆ ಕುಟುಂಬಸ್ಥರು ಆತನ ಕೈ ಕಾಲು ಕಟ್ಟಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.. ಅಲ್ಲಿಯೆ ಇದ್ದ ವ್ಯಕ್ತಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ ಮೇಲೆ ಪೊಲೀಸರು ಸ್ಥಳಕ್ಕೆ ಬಂದು ಪೇದೆಯನ್ನು ರಕ್ಷಣೆ ಮಾಡಿದ್ದಾರೆ.. ಗಾಯಗೊಂಡ ಪೇದೆ ಗುರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗಿದೆ.

ಘಟನೆ ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೇದೆ ವಿರುದ್ಧ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾಳೆ. ಪ್ರಕರಣ ಸಂಬಂಧ ಪೇದೆ ಗುರಪ್ಪನನ್ನ ಬಂಧಿಸಿ ಪೊಲೀಸರು ತನಿಖೆ ನಡೆಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button