ಬಿಎಸ್‌ವೈ, ಶೆಟ್ಟರ್ ಅನುಭವವನ್ನು ಪಕ್ಷ ಬಳಸಿಕೊಳ್ಳಲಿದೆ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪನವರು ಹಾಗೂ ಜಗದೀಶ ಶೆಟ್ಟರವರು ನಮ್ಮ ಪಕ್ಷದ ಹಿರಿಯ ನಾಯಕರಾಗಿದ್ದಾರೆ. ಅವರನ್ನು ಪಕ್ಷದಿಂದ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಮುಂದಿನ ದಿನಗಳಲ್ಲಿ ಅವರ ಅನುಭವವನ್ನು ಪಕ್ಷ ಬಳಸಿಕೊಳ್ಳುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಕುಟುಂಬ ಸಮೇತವಾಗಿ ಮತದಾನ ಕೇಂದ್ರಕ್ಕೆ ಆಗಮಿಸಿ ಸವಿಂಧಾನಿಕ ಮತದಾನ ಹಕ್ಕು ಚಲಾವಣೆ ಮಾಡಿದ ಬಳಿಕ ಮಾತನಾಡಿದ ಅವರು, ಬರುವ ದಿನಗಳಲ್ಲಿ ಪಕ್ಷದಿಂದ ಕೋರ ಕಮಿಟಿ ಸಭೆ ನಡೆಯಲಿದೆ. ಅಲ್ಲಿ ಈ ಇಬ್ಬರೂ ನಾಯಕರ ಸಲಹೆ ಸೂಚನೆಗಳನ್ನು ಪಡೆದುಕೊಂಡು ರಾಜ್ಯ ಮಟ್ಟದಲ್ಲಿ ತೀರ್ಮಾನಗಳನ್ನು ಕೈಗೊಳ್ಳುತ್ತೆವೆ ಎಂದರು.
ಬಿಎಸ್‌ವೈ ಅವರನ್ನು ತೆಗೆದು ಹಾಕಿಲ್ಲ
ಇತ್ತೀಚೆಗೆ ಕೆಲವರು ಬಿಎಸ್ ವೈ ಅವರನ್ನು ತೆಗೆದು ಹಾಕಲಾಗಿದೆ ಎಂಬ ಅರ್ಥದಲ್ಲಿ ಮಾತಾಡುತ್ತಿದ್ದಾರೆ. ಆದರೆ ಅದು ಸರಿಯಲ್ಲ. ಸ್ವತಃ ಬಿಎಸ್‌ವೈ ಅವರು ನಮ್ಮ ಪಕ್ಷದ ಹೈ ಕಮಾಂಡ್‌ಗೆ ನಾನು ಸಿಎಂ ಸ್ಥಾನದಿಂದ ನಿರ್ಗಮಿಸುತ್ತೇನೆ ಎಂದರು. ಅದರಂತೆ ವರಿಷ್ಠರು ತುಂಬಾ ಯೋಚನೆ ಮಾಡಿ, ಅಳೆದು ತೂಗಿ ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಿ. ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿವರನ್ನು ಆಯ್ಕೆ ಮಾಡಿದ್ದಾರೆ ಎಂದರು.
ಈ ಪಾಲಿಕೆ ಚುನಾವಣೆಯಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರದಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲ್ಲುವು ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ನಾಯಕತ್ವದ ಮೇಲೆ ಜನ ವಿಶ್ವಾ ಇಟ್ಟಿದ್ದಾರೆ. ಹಾಗಾಗಿ ಬಿಜೆಪಿ 60ರಿಂದ 55 ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.
