Breaking Newsಉತ್ತರ ಕನ್ನಡಜಿಲ್ಲಾ ಸುದ್ದಿ
Crime News: ಶಿರಸಿ ನಗರ ಪೊಲೀಸರ ಕಾರ್ಯಾಚರಣೆ : ವಾಹನದಲ್ಲಿ ಸಾಗಿಸುತ್ತಿದ್ದ ಒಂದು ಕೆಜಿ ಗಾಂಜಾ ವಶ

ಕಾರವಾರ : ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಶಿರಸಿ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ಮಾರಾಟ ಮಾಡಲು ಒಯ್ಯುತ್ತಿದ್ದ ಒಟ್ಟು ಒಂದು ಕೆಜಿ 910 ಗ್ರಾಂ.ತೂಕದ 25 ಸಾವಿರ ರೂ.ಮೌಲ್ಯದ ಗಾಂಜಾವನ್ನು ಭಾನುವಾರ ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ದೇವನಹಳ್ಳಿ ಗ್ರಾಮದ ಮಂಜುನಾಥ್ ನಾಯ್ಕ ಹಾಗೂ ವೀರಭದ್ರಪ್ಪ ಎಂದು ಗುರುತಿಸಲಾಗಿದೆ.
ಶಿರಸಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀರಾಮ ಕಾಲೋನಿಯ ರಸ್ತೆಯಲ್ಲಿ ಬೈಕ್ ನಲ್ಲಿ ಮಾರಾಟಕ್ಕೆ ಹೊರಟಿದ್ದಾಗ ಖಚಿತ ಮಾಹಿತಿ ಪಡೆದು ಶಿರಸಿ ಉಪ ವಿಭಾಗದ ಡಿ.ವೈ.ಎಸ್.ಪಿ.ರವಿ ಡಿ.ನಾಯ್ಕ ಅವರ ಮಾರ್ಗದರ್ಶನದಲ್ಲಿ ಸಿಪಿಐ ರಾಮಚಂದ್ರ ನಾಯಕ, ಪಿ.ಎಸ್.ಐ.ರಾಜಕುಮಾರ್ ಎಸ್.ಉಕ್ಕಲಿ ಅವರ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದ್ದು, ಆರೋಪಿ ಮಂಜುನಾಥ್ ಎಂಬುವವನ ವಿರುದ್ಧ ಈ ಹಿಂದೆ ಸುಲಿಗೆ ಪ್ರಕರಣ ಬನವಾಸಿ ಠಾಣೆಯಲ್ಲಿ ದಾಖಲಾಗಿತ್ತು.
