Breaking NewsLatestರಾಷ್ಟ್ರೀಯಸುದ್ದಿ
ಸಿಎಂ ಯೋಗಿ ಸರ್ಕಾರಕ್ಕೆ ಬೈದಿದ್ದಕ್ಕೆ ಮಾಜಿ ರಾಜ್ಯಪಾಲರ ವಿರುದ್ಧ ದೇಶದ್ರೋಹ ಪ್ರಕರಣ

ಲಕ್ನೋ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯಾನಾಥ್ ಸರ್ಕಾರದವನ್ನು ಅವಹೇಳನ ಮಾಡಿ ಮಾತನಾಡಿದ್ದಾರೆ ಎಂಬ ಆರೋಪದ ಮೇರೆಗೆ ಮಾಜಿ ರಾಜ್ಯಪಾಲ ಅಝೀಝ್ ಖುರೇಷಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ.
ಯೋಗಿ ಆದಿತ್ಯನಾಥ್ ಸರ್ಕಾರ ʼರಕ್ತ ಹೀರುವ ರಾಕ್ಷಸʼ ಎಂದು ಖುರೇಷಿ ಹೇಳಿಕೆ ನೀಡಿದ್ದಾರೆಂದು ಉಲ್ಲೇಖಿಸಿ ಬಿಜೆಪಿ ನಾಯಕ ಆಕಾಶ್ ಕುಮಾರ್ ಸಕ್ಸೇನಾ ದೂರು ನೀಡಿದ್ದು, ರಾಂಪುರ್ ಜಿಲ್ಲೆಯ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಮಾಜವಾದಿ ಪಕ್ಷದ ನಾಯಕ ಆಝಂ ಖಾನ್ ಅವರ ಮನೆಗೆ ಖುರೇಷಿ ಭೇಟಿ ನೀಡಿದ್ದ ದಿನ ಆದಿತ್ಯನಾಥ್ ಸರ್ಕಾರದ ವಿರುದ್ಧ ಖುರೇಷಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಾಧ್ಯಮಗಳಲ್ಲಿ ಪ್ರಸಾರ ಮಾಡಿದ್ದ ಸುದ್ದಿಯನ್ನು ಒಳಗೊಂಡಿರುವ ಪೆನ್ ಡ್ರೈವ್ ವೊಂದನ್ನು ಬಿಜೆಪಿ ನಾಯಕ ಪೊಲೀಸರಿಗೆ ಕೊಟ್ಟಿದ್ದಾರೆ.
