ಜಿಲ್ಲಾ ಸುದ್ದಿದಕ್ಷಿಣ ಕನ್ನಡ
Crime news: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆರೋಪಿ ಪರಾರಿ
ಮಂಗಳೂರು: ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾದಾಗ ಆರೋಪಿ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿರುವ ಪ್ರಕರಣ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೋಕ್ಸೋ ಕಾಯ್ದೆಯಡಿ ಉಪ್ಪಿನಂಗಡಿಯ ಮಸೂದ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಮಣಿನಾಲ್ಕೂರು ಗ್ರಾಮದ ಬಾಲಕಿ (17 ವರ್ಷ) ಬಿ ಸಿ ರೋಡ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ.
ಆಸ್ಪತ್ರೆಗೆ ದಾಖಲಾತಿ ಮಾಹಿತಿ ನೀಡುವಾಗ ಕುಟುಂಬಸ್ಥರು ಸ್ಪಷ್ಟವಾದ ಮಾಹಿತಿ ಹೇಳದ ಕಾರಣ ಆಸ್ಪತ್ರೆಯವರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಆಗ ಪ್ರಕರಣ ಬೆಳಕಿಗೆ ಬಂದಿದೆ.
ಬಾಲಕಿಗೆ ಆರೋಪಿ ಮಸೂದ್ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದ ಎನ್ನಲಾಗಿದ್ದು, ಬಾಲಕಿ ಒಬ್ಬಳೇ ಮನೆಯಲ್ಲಿದ್ದ ಸಂದರ್ಭದಲ್ಲಿ ಬಂದು ಅತ್ಯಾಚಾರ ಎಸಗಿದ್ದಾನೆ. ನಂತರ ನಾಪತ್ತೆಯಾಗಿದ್ದಾನೆಂದು ದೂರು ನೀಡಲಾಗಿದೆ. ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.




