Breaking Newsಬೆಳಗಾವಿ
ರೈತರು, ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಿಸಲು ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದು: ಸತೀಶ ಜಾರಕಿಹೊಳಿ

ಬೆಳಗಾವಿ: ಸೋಮವಾರದಿಂದ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಪಕ್ಷದಿಂದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಗೋಕಾಕ್ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ವಿಶೇಷವಾಗಿ ರೈತರಿಗೆ ಪರಿಹಾರ ಕೊಡಿಸಲು ಹಾಗೂ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ಮೈಸೂರು ಅತ್ಯಾಚಾರ ಪ್ರಕರಣ ಸೇರಿ ಇನ್ನಿತರೇ ವಿಷಯಗಳ ಕುರಿತು ಸಹ ಚರ್ಚಿಸಲಾಗುವುದು ಎಂದರು.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸದನದಲ್ಲಿ ಚರ್ಚಿಸದೇ ಮಸೂದೆ ಜಾರಿಗೊಳಿಸಿವೆ. ಇದು ಸರಿಯಾದ ಕ್ರಮವಲ್ಲ, ಈ ಬಗ್ಗೆ ಸಮಗ್ರವಾಗಿ ಚರ್ಚೆಯಾಗಬೇಕು. ನ್ಯೂನ್ಯತೆಗಳಿದ್ದರೇ ಸರಿಪಡಿಸಬೇಕು ಎಂದು ಹೇಳಿದರು. ಈ ಬಗ್ಗೆಯೂ ಕೂಡ ಸದನದಲ್ಲಿ ಧ್ವನಿ ಎತ್ತಲಾಗುವುದು ಎಂದು ತಿಳಿಸಿದರು.
