
ಬೆಂಗಳೂರು: ಹೆಸರಾಂತ ಚಿತ್ರನಟಿ ಜಯಂತಿ, ಮಾಜಿ ಸಂಸದ ಹಾಗೂ ರೈತ ಹೋರಾಟಗಾರ ಜಿ.ಮಾದೇಗೌಡ, ವಿಧಾನಸಭೆಯ ಮಾಜಿ ಸ್ಪೀಕರ್ ಕೃಷ್ಣ, ಹಾಲಿ ಶಾಸಕರಾಗಿದ್ದ ಸಿಎಂ ಉದಾಸಿ,ದಲಿತ ಕವಿ ಸಿದ್ದಲಿಂಗಯ್ಯ ನಿಘಂಟು ತಜ್ಞ ಪ್ರೋ. ವೆಂಕಟ ಸುಬ್ಬಯ್ಯ , ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಸೇರಿದಂತೆ ಇತ್ತೀಚಿಗೆ ಅಗಲಿದ ಗಣ್ಯರಿಗೆ ವಿಧಾನಸಭೆಯಲ್ಲಿ ಸೋಮವಾರ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸದನದ ಕಾರ್ಯಕಲಾಪ ಆರಂಭವಾಗುತ್ತಿದ್ದಂತೆ ಒಂದೇ ಮಾತರಂ ನಂತರ ಸದನವನ್ನು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತಿಚೆಗೆ ಆಗಲಿದೆ ಗಣ್ಯರಿಗೆ ಸಂತಾಪ ಸೂಚಿಸುವ ನಿರ್ಣಯ ಮಂಡಿಸಿದರು.
ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ, ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ , ಮಾಜಿ ಸಚಿವರಾಗಿದ್ದ ಮುಮ್ತಾಜ್ ಅಲಿಖಾನ್, ಎ ಕೆ. ಅಬ್ದುಲ್ ಸಮದ್, ಹೆಸರಾಂತ ಕ್ರೀಡಾಪಟು ಮಿಲ್ಕಾ ಸಿಂಗ್, ಸಿದ್ನಾಳ್ , ಶಾಣಪ್ಪ ಸೇರಿದಂತೆ ಗಣ್ಯರು ನಾಡು-ನುಡಿಗೆ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು. ನಂತರ ಸಂತಾಪ ನಿರ್ಣಯ ಬೆಂಬಲಿಸಿ ಮುಖ್ಯಮಂತ್ರಿ , ಸಭಾ ನಾಯಕ ಬಸವರಾಜ್ ಬೊಮ್ಮಾಯಿ ಮಾತನಾಡಿ ಮೃತರು ನಾಡು-ನುಡಿಗೆ ಸಲ್ಲಿಸಿದ ಸೇವೆಯನ್ನು ಸ್ಮರಿಸಿದರು.




