ಕಲಬುರ್ಗಿಜಿಲ್ಲಾ ಸುದ್ದಿ
ಕಲಬುರಗಿ: ಗಣೇಶ ಮೂರ್ತಿ ವಿರೂಪಗೊಳಿಸಿದ ಕಿಡಿಗೇಡಿಗಳು, ಸ್ಥಳಿಯರಿಂದ ಆಕ್ರೋಶ

ಕಲಬುರಗಿ: ಗಣೇಶ ಚತುರ್ಥಿ ಪ್ರಯುಕ್ತ ಪ್ರತಿಷ್ಠಾಪಿಸಲಾದ ಗಣೇಶ ಮೂರ್ತಿಯನ್ನು ಕಿಡಿಗೇಡಿಗಳು ವಿರೂಪಗೊಳಿಸಿದ ಘಟನೆ ಇಲ್ಲಿನ ನಂದಿ ಕಾಲೋನಿಯಲ್ಲಿ ನಡೆದಿದೆ.
ಕಾಲೋನಿಯಲ್ಲಿ ನಂದೀಶ್ವರ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷ ಕೂಡಾ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ತಡರಾತ್ರಿ ಯಾರು ಇಲ್ಲದೆ ವೇಳೆ ಗಣೇಶನ ಮೂರ್ತಿಯನ್ನು ಕಿಡಿಗೇಡಿಗಳು, ಮೂರ್ತಿಯ ಬಲಗೈ ಮತ್ತಿತರ ಭಾಗದಲ್ಲಿ ಹಾನಿ ಮಾಡಿ ಪರಾರಿಯಾಗಿದ್ದಾರೆ. ಸದ್ಯಕ್ಕೆ ಕಿಡಿಗೇಡಿಗಳ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಗಣೇಶ ವಿಗ್ರಹ ಹಾನಿ ಮಾಡಿ ವಿರೂಪಗೊಳಿಸಿದ ಆರೋಪಿಗಳ ವಿರುದ್ಧ ಬಡಾವಣೆಯ ಜನರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ನಡೆದ ಎರಡು ಗುಂಪುಗಳ ನಡುವಿನ ವೈಮನಸ್ಸಿನಿಂದ ಅಸಮಾಧಾನಗೊಂಡ ಎದುರಾಳಿ ಗುಂಪು ಗಣೇಶನ ಮೂರ್ತಿಯನ್ನು ವಿರೂಪಗೊಳಿಸಿರಬಹುದು ಎಂದು ಶಂಕಿಸಲಾಗಿದೆ. ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ತನಿಖೆ ನಡೆಯುತ್ತಿದೆ.




