ರಾಮನಗರ
ಗಣೇಶ ವಿಸರ್ಜನೆ ವೇಳೆ ಗಲಾಟೆ; ಓರ್ವನ ಕೊಲೆ

ರಾಮನಗರ: ಗಣೇಶ ವಿಸರ್ಜನೆ ವೇಳೆ ಗಲಾಟೆಯಾಗಿ ಮಾರಕಾಸ್ತ್ರದಿಂದ ವ್ಯಕ್ತಿಯೊರ್ವ ಚುಚ್ಚಿ, ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಾಗಡಿಯಲ್ಲಿ ನಡೆದಿದೆ.
ಮಾಗಡಿ ತಾಲೂಕಿನ ಸಾದಮಾರನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ನಂಜೇಗೌಡ (45) ವರ್ಷ ಕೊಲೆಯಾಗಿರುವ ದುರ್ದೈವಿಯಾಗಿದ್ದಾನೆ.
ಒಂದೇ ಊರಿನವರಿಂದಲೇ ನಂಜೇಗೌಡ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಜಗಳವಾಗಿದೆ.
ಜಗಳ ವಿಕೋಪಕ್ಕೆ ತೆರಳಿ ಮಾರಕಾಸ್ತ್ರದಿಂದ ಚುಚ್ಚಿ ತಲೆಗೆ ಬಲವಾದ ಆಯುಧದಿಂದ ಹೊಡೆದ ಪರಿಣಾಮ ಸ್ಥಳದಲ್ಲೆ ವ್ಯಕ್ತಿ ಮೃತ ಪಟ್ಟಿದ್ದಾನೆ. ಇದೊಂದು ರಾಜಕೀಯ ವೈಷಮ್ಯದ ಕೊಲೆ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಮಾಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.
ಮಾಗಡಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತನ ಶವವನ್ನ ಮಾಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನೆ ಮಾಡಲಿದ್ದಾರೆ.




