ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಧಾರವಾಡ: ಹಿಂದಿ ದಿವಸ್ ಆಚರಣೆ ವಿರೋಧಿಸಿ ಹಿಂದಿ ಬೋರ್ಡ್‌ಗಳಿಗೆ ಕಪ್ಪು ಮಸಿ ಬಳಿದು ಆಕ್ರೋಶ

ಧಾರವಾಡ: ಕೇಂದ್ರ ಸರ್ಕಾರದ ಹಿಂದೆ ಭಾಷೆ ಹೇರಿಕೆ ಹಾಗೂ ಹಿಂದಿ ಭಾಷೆ ದಿನಾಚರಣೆ ವಿರೋಧಿಸಿ, ಧಾರವಾಡದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಕಾರ್ಯಕರ್ತರು ಹಿಂದಿ ಬೋರ್ಡಗಳಿಗೆ ಕಪ್ಪು ಮಸಿ ಬಳಿದು, ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಉಳವಿ ಚೆನ್ನಬಸವೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ಮೂಲಕ ಆಗಮಿಸಿದ ಐವತ್ತಕ್ಕೂ ಹೆಚ್ಚು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಇನ್ನೂ ಇದೇವೇಳೆ ಧಾರವಾಡ ಹಿಂದಿ ಪ್ರಚಾರ ಸಭಾ ಮುಂಭಾಗದಲ್ಲಿ ಇದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾವಚಿತ್ರದ ಹಿಂದಿ ಬೋರ್ಡ್‌ಗೆ ಕಾರ್ಯಕರ್ತರು ಕಪ್ಪು ಮಸಿ ಬಳಿದು ಧಿಕ್ಕಾರ ಕೂಗಿದರು.

ಇದನ್ನೂ ಓದಿ : Protest: ಹಿಂದಿ ದಿವಸ್ ಆಚರಣೆ ವಿರೋಧಿಸಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ

ಇನ್ನು ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಹಿಂದಿ ದಿನವಾಗಿ ಆಚರಿಸಲು ಕೇಂದ್ರ ಸರಕಾರದ ನಿರ್ದೇಶನ ನೀಡಿದೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು. ಹಿಂದಿ ಭಾಷೆಯನ್ನು ಒತ್ತಾಯದ ಮೂಲಕ ರಾಜ್ಯಗಳ ಮೇಲೆ ಹೇರಲಾಗುತ್ತಿದೆ. ಕೇಂದ್ರ ಸರಕಾರ ದೇಶದಲ್ಲಿ ಸಂವಿಧಾನಬಾಹಿರವಾಗಿ ಹಿಂದಿಯನ್ನು ಹೇರುತ್ತಿರುವುದು ಸರಿಯಲ್ಲ. ಕೂಡಲೇ ಕೇಂದ್ರ ಸರ್ಕಾರ ಹಿಂದಿ ಭಾಷೆ ದಿನಾಚರಣೆಯನ್ನು ಹಿಂದಕ್ಕೆ ಪಡೆಯಬೇಕು, ಜೊತೆಗೆ ಬ್ಯಾಂಕಿಗ್ ಕ್ಷೇತ್ರದಲ್ಲಿ ಕನ್ನಡವನ್ನು ಆಡಳಿತ ಭಾಷೆಯಾಗಿ ಘೋಷಣೆ ಮಾಡಬೇಕು ಎಂದು ಅಗ್ರಹಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button