Breaking NewsLatestಕ್ರಿಕೆಟ್ಕ್ರೀಡೆ

IPL 2021: ಐಪಿಎಲ್ ಪಂದ್ಯಗಳನ್ನು ಕ್ರೀಡಾಂಗಣದಲ್ಲೇ ನೋಡಲು ಅವಕಾಶ

ದುಬೈ : ಸೆಪ್ಟಂಬರ್ 19ರಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಐದು ಬಾರಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ಹಾಗೂ ಮೂರು ಬಾರಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿ ಆಗುವುದರೊಂದಿಗೆ ಪ್ರಸಕ್ತ ಋತುವಿನ ಉಳಿದ ಪಂದ್ಯಗಳಿಗೆ ಚಾಲನೆ ದೊರೆಯಲಿದೆ.

ಈ ಬಾರಿಯ ಖುಷಿಯವಿಷಯವೆಂದರೆ ಪಂದ್ಯಗಳನ್ನು ಪ್ರೇಕ್ಷಕರು ಕ್ರೀಡಾಂಗಣದಲ್ಲಿ ವೀಕ್ಷಿಸಲು ಅನುಮತಿ ಇದೆ ಎಂದು ಐಪಿಎಲ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಕೊವಿಡ್19 ಹಿನ್ನೆಲೆಯಲ್ಲಿ ಭಾರತದಲ್ಲಿ ನಡೆಯುತ್ತಿದ್ದ ಐಪಿಎಲ್ ಪಂದ್ಯಗಳನ್ನು ರದ್ದುಗೊಳಿಸಿ ದುಬೈಗೆ ಸ್ಥಳಾಂತರಿಸಲಾಗಿತ್ತು. ಸೆಪ್ಟೆಂಬರ್ 16ರಿಂದ www.iplt20.com ಮತ್ತು PlatinumList.net ಮೂಲಕ ಕ್ರಿಕೆಟ್ ಅಭಿಮಾನಿಗಳು ಟಿಕೆಟ್ ಖರೀದಿಸಬಹುದು.

ಕೊವಿಡ್ ನಿಯಮಗಳನ್ನು ಪಾಲಿಸುವ ಉದ್ದೇಶದಿಂದ ಸೀಮಿತ ಟಿಕೆಟ್ ಗಳನ್ನು ನೀಡಲಾಗುತ್ತದೆ. ದುಬೈ, ಶಾರ್ಜಾ ಮತ್ತು ಅಬಿದಾಬಿಗಳಲ್ಲಿ ಪಂದ್ಯಗಳು ನಡೆಯಲಿವೆ.

Related Articles

Leave a Reply

Your email address will not be published. Required fields are marked *

Back to top button