ಬೆಳಗಾವಿ
ಕಬ್ಬಿನ ಗದ್ದೆಗೆ ಬೆಂಕಿ, ಸಾವಿರಾರು ಟನ್ ಕಬ್ಬು ಬೆಂಕಿಗೆ ಆಹುತಿ

ಬೆಳಗಾವಿ: ಕಬ್ಬಿನ ಗದ್ದೆಗೆ ಬೆಂಕಿ ಬಿದ್ದ ಪರಿಣಾಮ ಸಾವಿರಾರು ಟನ್ ಕಬ್ಬು ಬೆಳೆ ನಾಶವಾಗಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ನಡೆದಿದೆ.
ಯಡೂರವಾಡಿ ಹಾಗೂ ಮಾಂಜರಿವಾಡಿ ಗ್ರಾಮದ 15 ಕ್ಕೂ ಹೆಚ್ಚು ಜನರ ರೈತರ ಜಮೀನುಗಳ ಕಬ್ಬಿನ ಗದ್ದೆಗೆ ಬೆಂಕಿ ಬಿದ್ದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳೊಂದಿಗೆ ಸ್ಥಳೀಯರು ಬೆಂಕಿ ನಂದಿಸಿದ್ದಾರೆ.
ಕಬ್ಬಿನ ಗದ್ದೆಗೆ ಬೆಂಕಿ ಬಿದ್ದಿದ್ದರಿಂದ ಲಕ್ಷಾಂತರ ರೂಪಾಯಿ ಕಬ್ಬು ಬೆಳೆ ಬೆಂಕಿಗೆ ಆಹುತಿಯಾಗಿದೆ.ಇನ್ನು ಬೆಂಕಿ ಹತ್ತಿ ಕೊಳ್ಳಲು ಕಾರಣ ಏನು ಎಂಬುದು ಇನ್ನೂ ನಿಗೂಢವಾಗಿದ್ದು ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ




