ವದಂತಿಗಳಿಗೆ ಕಿವಿಕೊಡದೆ ಕೋವಿಡ್ ಲಸಿಕೆ ಪಡೆಯಲು ಜಿ್ಲ್ಲಾಧಿಕಾರಿ ಮನವಿ

ರಾಮನಗರ: ಕೋವಿಡ್ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಸಜ್ಜಾಗಿರುವ ಜಿಲ್ಲಾಡಳಿತ, ಮುಸ್ಲಿಂ ಸಮುದಾಯದ ಕಲ ಮಂದಿ ವ್ಯಾಕ್ಸಿನ್ ನಿರಕರಿಸಿದ ಕೆಲ ಘಟನೆಗಳ ಹಿನ್ನಲೆಯಲ್ಲಿ ವಂದಂತಿಗಳಿಗೆ ಕವಿಕೋಡಬೇಡಿ ಎಲ್ಲರೂ ಲಸಿಕೆ ಪಡೆಯಿರಿ ಎಂದು ಮುಸ್ಲಿಂ ಸಮುದಾಕ್ಕೆ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ಕರೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಸೀದಿ ಸಮಿತಿಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ಮಾತನಾಡಿ, ಕೋವಿಡ್ ಲಸಿಕೆಯನ್ನು 18 ವರ್ಷ ಮೇಲ್ಪಟ್ಟ ಎಲ್ಲರೂ ಪಡೆಯಬಹುದು ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಕೋವಿಡ್ ಲಸಿಕೆಯಿಂದ ತೊಂದರೆ ಉಂಟಾಗುತ್ತಿದೆ ಎಂಬ ವದಂತಿಗಳಿಗೆ ಕಿವಿಕೊಡಬಾರದೆಂದು ಮನವಿ ಮಾಡಿದರು.
ಕೋವಿಡ್ ಸೋಂಕು ಯಾವಾಗ, ಹೇಗೆ, ಎಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಾಗುವುದಿಲ್ಲ. ಸೋಂಕು ಹೆಚ್ಚಾದರೆ ಕಠಿಣ ಕ್ರಮಗಳು ಅನಿವಾರ್ಯವಾಗಿ ಕೈಗೊಳ್ಳಬೇಕಾಗುತ್ತದೆ. ಇದರಿಂದ ದುಡಿಮೆಗೆ ತೊಂದರೆಯಾಗುತ್ತದೆ. ಇದನ್ನು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು. ಲಸಿಕೆ ಪಡೆದ ನಂತರವು ಕೋವಿಡ್ ಸೋಂಕಿಗೆ ಒಳಗಾದರೂ ಸೋಂಕಿನ ತೀವ್ರತೆ ಕಡಿಮೆಯಿರುತ್ತದೆ ಎಂದು ಮನವರಿಕೆ ಮಾಡಿದರು
ಮಸೀದಿ ಸಮಿತಿ ಅವರು ತಮ್ಮ ಸಮುದಾಯದವರಿಗೆ ಕೋವಿಡ್ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸಬೇಕು. ಮಸೀದಿಯಲ್ಲಿ ನಮಾಜ್ ನಡೆಯುವ ಸಂದರ್ಭದಲ್ಲಿ ಸೆಪ್ಟೆಂಬರ್ 17 ರಂದು ನಡೆಯುವ ಲಸಿಕೆ ಅಭಿಯಾನದಲ್ಲಿ ಭಾಗವಹಿಸಿ ಲಸಿಕೆ ಪಡೆಯುವಂತೆ ತಿಳಿಸಿ. ಮಸೀದಿಗಳ ಸಮಿತಿಯಿಂದ ಮಾಹಿತಿ ಪಡೆದು ಮಸೀದಿಯ ಹತ್ತಿರ ಲಸಿಕಾ ಕೇಂದ್ರಗಳನ್ನು ತೆರೆಯಿರಿ. ಮಸೀದಿಯಲ್ಲಿ ನಮಾಜ್ ಮುಗಿಸಿದ ನಂತರ
ಜನರು ಕೋವಿಡ್ ಲಸಿಕೆ ಪಡೆದುಕೊಳ್ಳಬಹುದು ಎಂದರು.
ಕೋವಿಡ್ ಲಸಿಕೆ ಕೇವಲ ನಮ್ಮ ಕುಟುಂಬದವರು ಪಡೆದರೆ ಸಾಲದು. ನಮ್ಮ ಸುತ್ತ ಮುತ್ತಲು ವಾಸಿಸುವವರು ಪಡೆಯಬೇಕು ಏಕೆಂದರೆ ನಾವು ದಿನನಿತ್ಯದ ಜೀವನದಲ್ಲಿ ಅವರೊಂದಿಗೂ ಸಹ ಸಂಪರ್ಕದಲ್ಲಿ ಇರುತ್ತೇವೆ ಎಂದರು.




