ಮೆಟ್ರೋ
ಮೂರು ವರ್ಷಗಳಿಂದ ಕಾಡು ಪ್ರಾಣಿಗಳಿಂದ ಜೀವ ಹಾನಿಯಾಗಿಲ್ಲ: ಸಚಿವ ಉಮೇಶ್ ಕತ್ತಿ

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಕಾಡು ಪ್ರಾಣಿಗಳಿಂದ ಜೀವ ಹಾನಿಯಾಗಿಲ್ಲ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಶಾಸಕರಾದ ಹೆಚ್.ಡಿ.ಕುಮಾರ್ ಸ್ವಾಮಿ, ಶಿವಲಿಂಗೇಗೌಡ ಮತ್ತಿತರ ಸದಸ್ಯರ ಕಾಡು ಪ್ರಾಣಿಗಳು ನೀಡು, ಆಹಾರ ಹುಡುಕಿಕೊಂಡು ನಾಡಿಗೆ ಬರುತ್ತಿದ್ದು ಇದರಿಂದ ರೈತಾಪಿಗಳು ತೀರ್ವ ತೊಂದರೆ ಅನುಭವಿಸುತ್ತಿದ್ದಾರೆ ಮತ್ತು ಮೇಲಿಂದ ಮೇಲೆ ಜೀವಹಾನಿಯಾಗುತ್ತಿದೆ ಎಂದು ಸದಸ್ಯರು ಸರ್ಕಾರದ ಗಮನ ಸೆಳೆದರು.
ಸರ್ಕಾರದ ನಿರ್ಲಕ್ಷ್ಯದಿಂದ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸರ್ಕಾರ ಈ ಬಗ್ಗೆ ಗಂಭೀರ ಪ್ರಯತ್ನ ಮಾಡಬೇಕು ಮತ್ತು ಕಾಡುಪ್ರಾಣಿಗಳ ದಾಳಿಯಿಂದ ಮೃತಪಟ್ಟ ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ಉಮೇಶ್ ಕತ್ತಿ , ವಿಧಾನಮಂಡಲ ಅಧಿವೇಶನ ಮುಗಿದ ನಂತರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಎಲ್ಲೆಲ್ಲಿ ಸಮಸ್ಯೆ ತಿರ್ವವಾಗಿದೆ. ಅಂತಹ ಕಡೆಗಳಲ್ಲಿ ಸಮಸ್ಯೆ ನಿವಾರಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.



