ಉತ್ತರ ಕನ್ನಡಜಿಲ್ಲಾ ಸುದ್ದಿ

ಉಯಿಲಮುಡಿ ಕಡಲ ತೀರದಲ್ಲಿ ಮಹಿಳೆ ಮತ್ತು ಪುರುಷನ ಶವ ಪತ್ತೆ: ಬೆಚ್ಚಿ ಬಿದ್ದ ಗ್ರಾಮಸ್ಥರು

ಕಾರವಾರ : ಭಟ್ಕಳ ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಪನಕಟ್ಟೆ ಬಳಿಯ ಉಯಿಲಮುಡಿ ಕಡಲ ತೀರದಲ್ಲಿ ಮಹಿಳೆ ಮತ್ತು ಪುರುಷನ ಶವ ಜೀರ್ಣಾವಸ್ಥೆಯಲ್ಲಿ ಪತ್ತೆಯಾಗಿದೆ.

ಮೃತರನ್ನು ಬೆಂಗಳೂರು ಮೂಲದ ನಿವಾಸಿ ಆದಿತ್ಯ ಬಿ.ಎಸ್.(45), ಲಕ್ಷ್ಮಿ ಬಿ.(35) ಎಂದು ಗುರುತಿಸಲಾಗಿದೆ. ಅಂದಾಜು 35ರಿಂದ 40 ವರ್ಷದ ಮಹಿಳೆ ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಇವರ ಬಳಿ ಇದ್ದ ಆಧಾರ ಕಾರ್ಡ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸನ್ಸ್ ನಿಂದಾಗಿ ಗುರುತು ಪತ್ತೆ ಸಾಧ್ಯವಾಗಿದೆ.

ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆ ಪಿಎಸ್​ಐ ರೇವತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ವಿಷಯ ತಿಳಿದು ನೂರಾರು ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button