Breaking NewsLatestರಾಷ್ಟ್ರೀಯಸುದ್ದಿ

Helicopter Crash: ಸೇನಾ ಹೆಲಿಕಾಪ್ಟರ್ ಅಪಘಾತ : ಇಬ್ಬರು ಪೈಲಟ್​ಗಳ ಸಾವು

ಜಮ್ಮು ಮತ್ತು ಕಾಶ್ಮೀರ: ದಟ್ಟ ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್ʼಗಳು ಸಾವನ್ನಪ್ಪಿರುವ ಘಟನೆ ಜಮ್ಮು ಕಾಶ್ಮೀರ ರಾಜ್ಯದ ಉಧಂಪುರ ಜಿಲ್ಲೆಯಲ್ಲಿ ನಡೆದಿದೆ.

ಪಟ್ನಿಟಾಪ್ ಪ್ರದೇಶದಲ್ಲಿ ತರಬೇತಿ ಪಡೆಯುತ್ತಿದ್ದಾಗ, ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಶಿವ್ ಗರ್ ಧರ್ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ ಎಂದು ಜಮ್ಮು ಮೂಲದ ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ ಮತ್ತು ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬೆಳಗ್ಗೆ 10.30 ರಿಂದ 10.45 ರ ನಡುವೆ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್ ಸೇನಾ ವಿಮಾನಯಾನ ದಳಕ್ಕೆ ಸೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button