Latestಮೆಟ್ರೋರಾಜಕೀಯರಾಜ್ಯಸುದ್ದಿ

ವಿಧಾನಮಂಡಲ ಅಧಿವೇಶನಕ್ಕೆ ಲೋಕಸಭೆಯ ಸ್ಪೀಕರ್; ಸಂಸದೀಯ ಪ್ರಜಾಸತ್ತೆಯ ಅಣಕ: ನಾರಾಯಣಗೌಡ

ಬೆಂಗಳೂರು: ವಿಧಾನಮಂಡಳ ಅಧಿವೇಶನಕ್ಕೆ ಲೋಕಸಭೆಯ ಸ್ಪೀಕರ್ ಕರೆಸುವ ರಾಜ್ಯ ಸರ್ಕಾರದ ತೀರ್ಮಾನ ಸಂಸದೀಯ ಪ್ರಜಾಸತ್ತೆಯ ಮೌಲ್ಯಗಳಿಗೆ ವಿರುದ್ಧವಾದದ್ದು. ಈ ರೀತಿಯ ಉದಾಹರಣೆ ಕರ್ನಾಟಕದ ಇತಿಹಾಸದಲ್ಲಿ ನಡೆದಿರಲಿಲ್ಲ. ಈ ಮೂಲಕ ಕೆಟ್ಟ ಪರಂಪರೆಯನ್ನು ಆರಂಭಿಸಲಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ ಎ ನಾರಾಯಣಗೌಡ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಮಂಡಳದ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡುವ ಅವಕಾಶ ಇರುವುದು ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಮಾತ್ರ. ಲೋಕಸಭೆ ಸ್ಪೀಕರ್ ಕರೆಸುವ ಮೂಲಕ ಈ ನಿಯಮವನ್ನು ಗಾಳಿಗೆ ತೂರಲಾಗಿದೆ. ಇದು ಪ್ರಜಾತಂತ್ರ ವ್ಯವಸ್ಥೆಯ ಅಣಕವಾಗಿದೆ. ಲೋಕಸಭೆ ಮತ್ತು ವಿಧಾನಸಭೆ ಎರಡೂ ಕೂಡ ಜನಪ್ರತಿನಿಧಿಗಳ ಸಭೆ. ಒಂದು ಹೆಚ್ಚು, ಒಂದು ಕಡಿಮೆಯಿಲ್ಲ. ಎರಡೂ ಕೂಡ ಭಾರತ ಸಂವಿಧಾನದ ಪ್ರಕಾರವೇ ನಡೆಯುತ್ತವೆ. ವಿಧಾನಮಂಡಳದಲ್ಲಿ ಲೋಕಸಭೆ ಸ್ಪೀಕರ್ ಕರೆಸುವ ಔಚಿತ್ಯವಾದರೂ ಏನು? ಈ ಸಂಪ್ರದಾಯ ಹುಟ್ಟುಹಾಕುವ ಅಗತ್ಯವಾದರೂ ಏನಿತ್ತು? ಎಂದು ಪ್ರಶ್ನಿಸಿದ್ದಾರೆ.

ಒಕ್ಕೂಟ ಸರ್ಕಾರ ಭಾರತ ಗಣರಾಜ್ಯದ ಒಕ್ಕೂಟ ತತ್ವಗಳನ್ನು ಒಂದೊಂದಾಗಿ ಮುರಿಯುತ್ತಾ ಬರುತ್ತಿದೆ. ಎಲ್ಲ ವಿಷಯದಲ್ಲೂ ಏಕತ್ವವನ್ನು ಹೇರುವ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತ ಬರುತ್ತಿದೆ. ಕರ್ನಾಟಕ ಸರ್ಕಾರವು ಈ ಖೆಡ್ಡಾಗೆ ಬಿದ್ದು ತನ್ನ ತನವನ್ನು ಕಳೆದುಕೊಳ್ಳಬಾರದಿತ್ತು. ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಸಭಾಧ್ಯಕ್ಷರು ಕೂಡಲೇ ಜಂಟಿ ಅಧಿವೇಶನವನ್ನು ರದ್ದುಗೊಳಿಸಬೇಕು. ಲೋಕಸಭೆ ಸ್ಪೀಕರ್ ಜತೆ ಬೇರೆ ಸ್ಥಳದಲ್ಲಿ ಕಾರ್ಯಕ್ರಮ ನಡೆಸಿಕೊಳ್ಳಲಿ. ಕರ್ನಾಟಕ ವಿಧಾನಮಂಡಳದ ಪಾವಿತ್ರ್ಯತೆಯನ್ನು ಹಾಳು ಗೆಡಹುವುದು ಬೇಡ ಎಂದು ಸಲಹೆ ನೀಡಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button