Latestಜಿಲ್ಲಾ ಸುದ್ದಿಬೆಳಗಾವಿರಾಜಕೀಯ

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತೆ: ಸಿಎಂ ಬೊಮ್ಮಾಯಿ

ಬೆಳಗಾವಿ: ಬೆಳಗಾವಿಯಲ್ಲಿ ಸಕ್ಕರೆ ನಿರ್ದೇಶನಾಲಯ ಕಚೇರಿ ಆರಂಭಕ್ಕೆ ಆದೇಶ ಮಾಡಿದ್ದೇನೆ. ಅಕ್ಟೋಬರ್ 3 ರಿಂದ ಸಕ್ಕರೆ ನಿರ್ದೇಶನಾಲಯ ಕಾರ್ಯಾರಂಭ ಮಾಡಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದರು.

ರೈತರ ಜೊತೆಗಿನ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸುವರ್ಣಸೌಧದಲ್ಲಿ ಯಾವ ಯಾವ ಕಚೇರಿಗಳನ್ನು ಆರಂಭಿಸಬೇಕೊ ಅವುಗಳನ್ನ ಡಿಸೆಂಬರ್ ಒಳಗೆ ಆರಂಭ ಮಾಡುತ್ತೇವೆ. ಚಳಿಗಾಲದ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲೇ ಮಾಡುತ್ತೇವೆ, ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಆಗಲಿದೆ ಎಂದರು.

ಇನ್ನು ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಹೈಕಮಾಂಡ್ ಬ್ರೇಕ್ ವಿಚಾರಕ್ಕೆ ಇದೇ ವೇಳೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಈ ಕುರಿತು ಈಗಾಗಲೇ ರಾಜ್ಯ ಉಸ್ತುವಾರಿ ಅರುಣ್​​​​​​​​​ ಸಿಂಗ್ ಮಾತನಾಡಿದ್ದಾರೆ. ಯಡಿಯೂರಪ್ಪನವರಿಗೆ ಪ್ರವಾಸ ಮಾಡಲು ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ, ಆ ಕುರಿತು ಹೆಚ್ಚಿಗೆ ಏನು ಹೇಳಲ್ಲ ಎಂದು ತಿಳಿಸಿದರು.

ಇನ್ನು ಭಾರತ ಬಂದ್ ವಿಚಾರ, ಈಗಾಗಲೇ ಕೋವಿಡ್ ನಿಂದ ಜನ ಸಂಕಷ್ಟದಲ್ಲಿದ್ದಾರೆ. ರೈತರು, ವ್ಯಾಪಾರಸ್ಥರು, ಸಾರ್ವಜನಿಕರಿಗೆ ತೊಂದರೆಯಾಗುತ್ತೆ, ದಯವಿಟ್ಟು ರೈತರು ಸಂಘಟನೆಗಳು ಸಹಕರಿಸಬೇಕು ಎಂದು ಸಿಎಂ ಬೊಮ್ಮಾಯಿ ಮನವಿ ಮಾಡಿಕೊಂಡರು.

Spread the love

Related Articles

Leave a Reply

Your email address will not be published. Required fields are marked *

Back to top button