ಭಾರತ್ ಬಂದ್ – ಕೊಡಗಿನಲ್ಲಿ ಕೃಷಿ ಮಸೂದೆಗೆ ವ್ಯಾಪಕ ವಿರೋಧ

ಕೊಡಗು : ರೈತ ಸಂಘಟನೆಯಿಂದ ದೇಶವ್ಯಾಪಿ ಬಂದ್ ಗೆ ಕರೆ ನೀಡಲಾಗಿತ್ತಾದರೂ ಕೊಡಗಿನಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ಇದೆ. ಜನಜೀವನ ಎಂದಿನಂತೆ ಇದ್ದು, ನಗರ ಪ್ರದೇಶಗಳಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಭಾರತ ಬಂದ್ ಬೆಂಬಲಿಸಿ ಮಡಿಕೇರಿಯಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆಯಲ್ಲಿ ಆಕ್ರೋಶ ವ್ಯಕ್ತವಾಯಿತು.
ಮಳೆಯ ನಡುವೆ ರೈತರು ಮತ್ತು ವಿವಿಧ ಸಂಘ ಸಂಸ್ಥೆಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದವು. ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಿಲ್ಲಾ ಅದ್ಯಕ್ಷರಾದ ಕಾಡ್ಯಮಾಡ ಮನುಸೋಮಯ್ಯ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಯಿತು.
ಮಡಿಕೇರಿಯ ಇಂದಿರಾಗಾಂಧಿ ವೃತ್ತದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಉಳಿದಂತೆ ಭಾರತ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಜನ ಸಂಚಾರ ಎಂದಿನಂತೆ ಇದ್ದು, ವಾಹನಗಳು, ಶಾಲೆಗಳು, ಅಂಗಡಿ ಮುಗ್ಗಟ್ಟು ಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿದ್ದವು.




