ಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಧಾರವಾಡದಲ್ಲಿ ಎಮ್ಮೆ ತಂದು ಕೇಂದ್ರ ಸರ್ಕಾರದ ಆಕ್ರೋಶ: ಜಯ ಕರ್ನಾಟಕ ಸಂಘಟನೆಯಿ ಪ್ರತಿಭಟನೆ

ಧಾರವಾಡ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ಕರೆ ನೀಡಿರುವ ಭಾರತ್ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ, ಧಾರವಾಡದಲ್ಲಿ ಜಯ ಕರ್ನಾಟಕ ಸಂಘಟನೆಯು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿತ್ತು. ಪ್ರತಿಭಟನೆಯ ಸ್ಥಳಕ್ಕೆ ಎಮ್ಮೆ ಕರೆತಂದು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡದ ಜುಬ್ಲಿ ವೃತ್ತದಲ್ಲಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಸೈಕಲ್ ಹಾಗೂ ಎಮ್ಮೆಯನ್ನು ಕರೆತಂದು ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು. ಕಳೆದ ಹಲವು ತಿಂಗಳುಗಳಿಂದ ಕೃಷಿ ಕಾಯ್ದೆಯ ವಿರುದ್ಧ ರೈತರು ವಿರೋಧ ವ್ಯಕ್ತಪಡಿಸುತ್ತಾ ಬರುತ್ತಿದ್ದಾರೆ‌. ಆದರೆ ಕೇಂದ್ರ ಸರ್ಕಾರ ರೈತರನ್ನು ಕರೆದು ಮಾತಾಡಿಸುವ ಸೌಜನ್ಯವನ್ನು ತೋರಿಸುತ್ತಿಲ್ಲ ಎಂದು ಪ್ರಧಾನಿ ವಿರುದ್ಧ ಧಿಕ್ಕಾರ ಕೂಗಿದರು.

ಇನ್ನೂ ಜುಬ್ಲಿ ವೃತ್ತದಲ್ಲಿ ಹತ್ತಕ್ಕೂ ಹೆಚ್ಚು ರೈತ ಹಾಗೂ ಕಾರ್ಮಿಕ ಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಜಯ ಕರ್ನಾಟಕ ಸಂಘಟನೆಯು ಕಾರ್ಯಕರ್ತರು ಬೆಂಬಲ ನೀಡಿ, ಎಮ್ಮೆ ತಂದು ಪ್ರತಿಭಟನೆಯಲ್ಲಿ ಭಾಗಿಯಾಗುವ ಮೂಲಕ ರೈತರೊಂದಿಗೆ ನಾವಿದ್ದೇವೆ. ರೈತ ವಿರೋಧಿ ಕಾನೂನುಗಳನ್ನು ಕೇಂದ್ರ ಸರ್ಕಾರ ಈ ಕೂಡಲೇ ಹಿಂಪಡೆಯಬೇಕು‌ ಎಂದು ಆಗ್ರಹಿಸಿದರು.‌

Spread the love

Related Articles

Leave a Reply

Your email address will not be published. Required fields are marked *

Back to top button