Latestಜಿಲ್ಲಾ ಸುದ್ದಿಬಾಗಲಕೋಟೆರಾಜಕೀಯ
ಉಪ ಚುನಾವಣೆ ಎದುರಿಸಲು ಸಿದ್ಧ- ಎರಡು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ: ಸಿದ್ದರಾಮಯ್ಯ ವಿಶ್ವಾಸ

ಬಾಗಲಕೋಟೆ: ಉಪ ಚುನಾವಣೆ ಬಂದಿರೋದನ್ನು ಸ್ವಾಗತಿಸುತ್ತೇನೆ. ಉಪ ಚುನಾವಣೆಗೆ ಈಗಾಗಲೇ ತಯಾರಿ ಮಾಡಿಕೊಂಡಿದ್ದೇವೆ .ಚುನಾವಣೆ ಎದುರಿಸಲು ನಾವು ಸಿದ್ದವಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಾದಾಮಿಯಲ್ಲಿ ಮಾತನಾಡಿದ ಅವರು, ಹಾನಗಲ್ ಮತ್ತು ಸಿಂದಗಿಯಲ್ಲಿ ಗೆಲ್ಲುತ್ತೇವೆ. ಅಭ್ಯರ್ಥಿಗಳ ಆಯ್ಕೆ ಮಾಡಿಲ್ಲವೆಂದು ಇದೇ ಸಂದರ್ಭದಲ್ಲಿ ಹೇಳಿದರು.
ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಹಾಗೂ ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಶಾಸಕರಾಗಿದ್ದ ಎಂ.ಸಿ. ಮನಗೂಳಿ ಅವರ ನಿಧನದಿಂದ ತೆರವಾಗಿದ್ದ ಈ ಎರಡೂ ಕ್ಷೇತ್ರಗಳ ಉಪ ಚುನಾವಣೆ ಅಕ್ಟೋಬರ್ 30ರಂದು ನಡೆಯಲಿದೆ.



