ಮಡಿಕೇರಿ ದಸರಾಗೆ 1 ಕೋಟಿ ರೂ. ಅನುದಾನ

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ಒಂದು ಕೋಟಿ ರೂ. ಬಿಡುಗಡೆ ಮಾಡುವಂತೆ ಕೋರಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದರು.
ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಅವರ ಮನವಿಗೆ ಸ್ಪಂದಿಸಿ, ಮಡಿಕೇರಿ ದಸರಾ ಉತ್ಸವಕ್ಕೆ ಒಂದು ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರ್ಥಿಕ ಇಲಾಖೆಗೆ ಶಿಫಾರಸ್ಸು ಮಾಡಿದ್ದಾರೆ.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾಡಿರುವ ಮನವಿಗೆ ಕೂಡಲೇ ಸ್ಪಂದಿಸಿರುವ ಮುಖ್ಯಮಂತ್ರಿಗಳು ಒಂದು ಕೋಟಿ ರೂ. ಮಂಜೂರು ಮಾಡುವಂತೆ ಸೂಚಿಸಿದ್ದಾರೆ.
ಮಡಿಕೇರಿಯಲ್ಲಿ ಪ್ರತೀವರ್ಷ ದಸರಾವನ್ನು ಅತಿ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತದೆ. ಈ ಉತ್ಸವಕ್ಕೆ ಪ್ರತೀ ವರ್ಷ ಸರಕಾರ ಒಂದು ಕೋಟಿ ರೂ.ಗಳ ಅನುದಾನ ನೀಡುತ್ತಿದೆ. ಆದರೆ ಕಳೆದ ಎರಡು ವರ್ಷಗಳಿಂದ ಕೊರೋನಾ ಹಿನ್ನೆಲೆಯಲ್ಲಿ ಸರಳವಾಗಿ ದಸರಾ ಆಚರಣೆ ಮಾಡಲಾಗಿದ್ದು, ಈ ಬಾರಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ದಸರಾವನ್ನು ವೈಭವದಿಂದ ಆಚರಿಸಲು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರಕಾರ ಒಂದು ಕೋಟಿ ರೂ.ಗಳ ಅನುದಾನ ಬಿಡುಗಡೆ ಮಾಡಬೇಕು ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು.
ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿಯವರು ಒಂದು ಕೋಟಿ ರೂ. ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಶಿಫಾರಸ್ಸು ಮಾಡಿದ್ದಾರೆ.
ಮುಖ್ಯ ಮಂತ್ರಿಯವರ ಪ್ರಧಾನ ಕಾರ್ಯದರ್ಶಿಯವರು ಈ ಸಂಬಂಧ ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದು ಅನುದಾನ ಬಿಡುಗಡೆ ಮಾಡುವಂತೆ ತಿಳಿಸಿದ್ದಾರೆ. ಮಡಿಕೇರಿ ದಸರಾ ಹಿನ್ನೆಲೆ ಮಡಿಕೇರಿ ರಸ್ತೆಗಳ ದುರಸ್ತಿಗೆ 75 ಲಕ್ಷ ರೂ. ಮೀಸಲಿಟ್ಟು, ಉಳಿದ 25 ಲಕ್ಷ ರೂ.ಗಳನ್ನು ದಸರಾಕ್ಕೆ ಬಳಸುವಂತೆ ಸರ್ಕಾರ ಸಲಹೆ ನೀಡಿದೆ ಎಂದು ತಿಳಿದು ಬಂದಿದೆ.




