Latestಮೆಟ್ರೋರಾಜಕೀಯ

ಸಿಎಂ ಬೊಮ್ಮಾಯಿ ಭೇಟಿಯಾದ ಜಯಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸಂಬಂಧ ಬೆಂಗಳೂರಿನಲ್ಲಿ ಇಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.

ಬಳಿಕ ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಮುಖ್ಯಮಂತ್ರಿಗಳು ಹೋರಾಟ ಕೈ ಬಿಡಿ ಎಂದು ಮನವಿ ಮಾಡಿದ್ದಾರೆ. ಮೀಸಲಾತಿ ಸಂಬಂಧವೂ ಕೆಲ ವಿಷಯಗಳನ್ನು ಹೇಳಿದ್ದಾರೆ. ಇದರ ಬಗ್ಗೆ ವಿದ್ಯಾ ಭವನದಲ್ಲಿ ನಡೆಯಲಿರುವ ಸಭೆಯಲ್ಲಿ ತಿಳಿಸುತ್ತೇವೆ ಎಂದರು.

ನಮ್ಮ ಜನಪ್ರತಿನಿದಿಗಳು ಏನು ಹೇಳುತ್ತಾರೋ ಅದರ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ನಾವು ಇನ್ನೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೊತೆಗೂ ಚರ್ಚೆ ಮಾಡಬೇಕು. ಹೀಗಾಗಿ ಅವರ ಜೊತೆ ಚರ್ಚಿಸಿ, ಮುಂದಿನ ತಮ್ಮ‌ ನಡೆ ಏನೆಂಬುದರ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button