
ಕೋಲ್ಕತ್ತಾ: ಬಂಗಾಳ ಉಪ ಚುನಾವಣೆಯಲ್ಲಿ ಮೊದಲ ಸುತ್ತಿನ ಮತ ಎಣಿಕೆಯ ನಂತರ ಟಿಎಂಸಿ ಎಲ್ಲಾ ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಭವಾನಿಪುರ ವಿಧಾನಸಭಾ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಮುನ್ನಡೆ ಸಾಧಿಸಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ 11ನೇ ಸುತ್ತಿನ ಮತ ಎಣಿಕೆಯ ಬಳಿಕ ಮಮತಾ ಬ್ಯಾನರ್ಜಿ ಅವರು 34,000 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಇದುವರೆಗೆ ಮಮತಾ ಬ್ಯಾನರ್ಜಿ ಒಟ್ಟು 37,504 ಮತಗಳನ್ನು ಪಡೆದಿದ್ದಾರೆ. ಬಿಜೆಪಿಯ ಪ್ರಿಯಾಂಕಾ ತಿಬ್ರೆವಾಲ್ 12,435 ಮತಗಳನ್ನು ಪಡೆದಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಮಮತಾ ಅವರು ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಆ ಹಿನ್ನೆಲೆಯಲ್ಲಿ ಮಮತಾ ಉಪ ಚುನಾವಣೆಯಲ್ಲಿ ಕಣಕ್ಕಿಳಿದಿದ್ದಾರೆ



