ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ

ಬೆಂಗಳೂರು: ಮೈಸೂರು ಜಿಲ್ಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳಿಬ್ಬರ ಬೀದಿ ಜಗಳ ಅವರಿಬ್ಬರ ವರ್ಗಾವಣೆಯಲ್ಲಿ ಅಂತ್ ಕಂಡಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ರನ್ನು ಸರ್ಕಾರ ವರ್ಗಾವಣೆ ಮಾಡಿದೆ.
ಶನಿವಾರ ತಡರಾತ್ರಿ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ. ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್ ನೇಮಕ ಮಾಡಲಾಗಿದೆ. ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮೀಕಾಂತ್ ರೆಡ್ಡಿ ನೇಮಕಗೊಂಡಿದ್ದಾರೆ.
ರೋಹಿಣಿ ಸಿಂಧೂರಿ ಅವರನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. 2020ರಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾವಣೆಯಾಗುವ ಮೊದಲು ರೋಹಿಣಿ ಇದೇ ಇಲಾಖೆಯ ಆಯುಕ್ತರಾಗಿದ್ದರು. ಶಿಲ್ಪಾನಾಗ್‌ರನ್ನು ನಿರ್ದೇಶಕರು (ಇ-ಆಡಳಿತ) ಆರ್‌ಡಿ&ಪಿಆರ್, ಬೆಂಗಳೂರು ಹುದ್ದೆಗೆ ನೇಮಕ ಮಾಡಲಾಗಿದೆ.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ 4ನೇ ಬಾರಿಗೆ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದೆ. ಶಿಲ್ಪಾನಾಗ್ ಮತ್ತು ರೋಹಿಣಿ ಸಿಂಧೂರಿ ಜಟಾಪಟಿ ಸರ್ಕಾರಕ್ಕೆ ತಲೆನೋವಾಗಿತ್ತು. ಇದೀಗ ಇಬ್ಬರನ್ನೂ ವರ್ಗಾವಣೆ ಮಾಡಲಾಗಿದೆ.





Rohini mam is gem. She is doing work honestly. Transfer is not the right decision by CM or state government. She knows how to handle or administrate the district very well compared any politician. She is not just passed IAS officer.