Latestಕಲಬುರ್ಗಿಜಿಲ್ಲಾ ಸುದ್ದಿ
Thunderbolt: ಕಲಬುರಗಿ ಜಿಲ್ಲೆಯಲ್ಲಿ ಸಿಡಿಲು ಬಡೆದು ಇಬ್ಬರ ದುರ್ಮರಣ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಗುಡುಗು ಸಿಡಿಲು ಸಹಿತ ವರುಣ ಅಬ್ಬರಿಸುತ್ತಿದ್ದಾನೆ. ಸಿಡಿಲು ಹೊಡೆತಕ್ಕೆ ಇಬ್ಬರು ದುರ್ಮರಣ ಹೊಂದಿದ್ದಾರೆ.
ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದಲ್ಲಿ ಸಿಡಲಿಗೆ ಇಬ್ಬರು ಕೂಲಿ ಕಾರ್ಮಿಕರು ಬಲಿಯಾಗಿದ್ದಾರೆ. ರಾಜ್ಅಹ್ಮದ್ (65) ಜಬ್ಬಾರ್ (32) ಮೃತ ಕೂಲಿ ಕಾರ್ಮಿಕರು. ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಮನೆಗೆ ಆಧಾರ ಸ್ಥಂಭವಾಗಿದ್ದವರನ್ನು ಕಳೆದುಕೊಂಡ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರೀಶಿಲನೆ ಮಾಡಿದ್ದಾರೆ. ಈ ಕುರಿತು ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



