ಜಿಲ್ಲಾ ಸುದ್ದಿ

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಪತ್ನಿ, ಮಗ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಭಾರಿ ಸಂಚಲನ ಮೂಡಿಸಿದ್ದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ರಾಜೇಶ್ವರಿ ಗೆಳೆಯ ನಿರಂಜನ ಭಟ್‌ಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಆರೋಪಿ ಚಾಲಕ ರಾಘವೇಂದರ ಖುಲಾಸೆಯಾಗಿದ್ದಾನೆ.

ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.

ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತಾರಾಮ್‌ ಶೆಟ್ಟಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. 78 ಸಾಕ್ಷಿಗಳ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿತ್ತು.

2016ರ ಜುಲೈ 28ರಂದು ಉದ್ಯಮಿ ಭಾಸ್ಕರ್ ಶೆಟ್ಟಿ ಅವರನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಪ್ರಕರಣದ ಆರೋಪಿಗಳಾದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಹಾಗೂ ಮತ್ತೊಬ್ಬ ಆರೋಪಿ ರಾಘವೇಂದ್ರಗೆ ಜಾಮೀನು ದೊರೆತಿತ್ತು. ಪುತ್ರ ನವನೀತ್ ಶೆಟ್ಟಿ, ನಂದಳಿಕೆಯ ನಿರಂಜನ್ ಭಟ್‌ ಜೈಲಿನಲ್ಲಿದ್ದರು.

Related Articles

Leave a Reply

Your email address will not be published. Required fields are marked *

Back to top button