Latestಉತ್ತರ ಕನ್ನಡಜಿಲ್ಲಾ ಸುದ್ದಿರಾಜಕೀಯ

ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹತಾಶರಾಗಿದ್ದಾರೆ: ಸಚಿವ ಶಿವರಾಮ್ ಹೆಬ್ಬಾರ್

ಕಾರವಾರ : ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಹತಾಶರಾಗಿದ್ದಾರೆ. ಹೀಗಾಗಿ ಅವರು ಪರಸ್ಪರ ಬೈದಾಡಿಕೊಳ್ಳುತ್ತಿದ್ದಾರೆ. ಏತಕ್ಕಾಗಿ ಬೈತಾರೆ ಅನ್ನೋದು ಸ್ವತಃ ಅವರಿಗೇ ಗೊತ್ತಾಗಿಲ್ಲ. ಇದಕ್ಕೆ ಅವರ ಹತಾಶ ಸ್ಥಿತಿ ಕಾರಣ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವ್ಯಂಗ್ಯವಾಡಿದ್ದಾರೆ.

ಶಿರಸಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಜಯ ಗಳಿಸಲಿದೆ ಎಂದರು.

ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ವಿಜಯ ದಶಮಿ ಮುಗಿಯಲಿ ಎಂದು ಸುಮ್ಮನಿದ್ದೆವು.ಇಂದಿನಿಂದ ಪ್ರಚಾರದಲ್ಲಿ ಸಚಿವರ ದಂಡೇ ಕ್ಷೇತ್ರಕ್ಕೆ ಬರಲಿದೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button