ನವೆಂಬರ್ 2 ರಂದು ಕಬಿನಿ ಮತ್ತು ಕೆಆರ್ ಎಸ್ ಗೆ ಸಿಎಂ ಬಾಗಿನ

ಮೈಸೂರು: ನವೆಂಬರ್ 2 ರಂದು ಸಿಎಂ ಬಸವರಾಜ ಬೊಮ್ಮಾಯಿ ಕಬಿನಿ ಹಾಗೂ ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಆಗಮಿಸಿ ಬಾಗಿನ ಅರ್ಪಿಸಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ಕೆಅರ್ ಸಾಗರಕ್ಕೆ 12.45 ಕ್ಕೆ ಆಗಮಿಸಿ ಶ್ರೀ ಕಾವೇರಿ ಮಾತೆಗೆ ಪೂಜೆ ಮತ್ತು ಕೆಆರ್ ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿ ಇರುವ ಕಬಿನಿ ಜಲಾಶಯ 84 ಅಡಿ ನೀರನ್ನು ಸಂಗ್ರಹ ಸಾಮರ್ಥ್ಯವಿದೆ. ಕೇರಳದ ವೈನಾಡು ಪ್ರದೇಶದಲ್ಲಿ ಸತತವಾಗಿ ಮಳೆ ಆಗುತ್ತಿದ್ದು, ಸಂಪೂರ್ಣ ಭರ್ತಿಯಾಗಿದೆ. ಕೇರಳದಲ್ಲಿ ಅತೀ ಹೆಚ್ಚು ಹಿಂಗಾರು ಮಳೆ ಬಿದ್ದ ಕಾರಣ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಅರ್ಎಸ್ ಆಣೆಕಟ್ಟು 124.80 ಅಡಿ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ ತಲುಪಿದ್ದು, ಸಂಪೂರ್ಣ ಭರ್ತಿಯಾಗಿದೆ. ಕಳೆದ 15 ದಿನಗಳಲ್ಲಿ ಕೊಡಗು ಹಾಗೂ ಜಲಾಶಯದ ಪಾತ್ರಗಳಲ್ಲಿ ಅತಿ ಹೆಚ್ಚು ಮಳೆಯಾದ್ದರಿಂದ ನವೆಂಬರ್ ತಿಂಗಳಲ್ಲಿ ತುಂಬಿರುವುದು ವಿಶೇಷವಾಗಿದೆ.



