ಜಿಲ್ಲಾ ಸುದ್ದಿಮೈಸೂರು
ಡೆತ್ ನೋಟ್ ಬರೆದಿಟ್ಟು ಟ್ರಾಫಿಕ್ ಎಎಸ್ ಐ ಆತ್ಮಹತ್ಯೆ

ಮೈಸೂರು: ಡೆತ್ ನೋಟ್ ಬರೆದಿಟ್ಟು ಟ್ರಾಫಿಕ್ ASI ಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ ನಗರದ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಎಎಸ್ಸೈ ಶಿವಕುಮಾರಸ್ವಾಮಿ (54) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗೌರಿ ಶಂಕರ ನಗರದಲ್ಲಿ ಘಟನೆ ನಡೆದಿದ್ದು, ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ತಮ್ಮ ಈ ನಿರ್ಧಾರಕ್ಕೆ ಕೌಟುಂಬಿಕ ಕಲಹವೇ ಕಾರಣ ಎಂದು ಬರೆದಿದ್ದಾರೆ. ಘಟನೆ ಸಂಬಂಧ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕೆಆರ್,ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




