
ಆಂಧ್ರಪ್ರದೇಶ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಂಧ್ರ ಪ್ರದೇಶದ ತಿರುಪತಿಯಲ್ಲಿ ಇಂದು ನಡೆದ ದಕ್ಷಿಣ ವಲಯ ಮಂಡಳಿಯ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉದ್ಘಾಟಿಸಿದರು.
ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಲಕ್ಷ್ಯದ್ವೀಪದ ಆಡಳಿತಗಾರ ಪ್ರಫುಲ್ ಪಟೇಲ್, ಪುದುಚೆರಿ ಲೆಫ್ಟಿನೆಂಟ್ ಗವರ್ನರ್ ಡಾ. ತಮಿಲಿಸಾಯಿ ಸೌಂದರಾಜನ್, ಪಾಂಡಿಚೇರಿಯ ಮುಖ್ಯಮಂತ್ರಿ ಎನ್ ರಂಗಸ್ವಾಮಿ, ಪಾಂಡಿಚೇರಿಯ ಲೆಫ್ಟನೆಂಟ್ ಗವರ್ನರ್ ಎಡ್ಮಿರಲ್ ಡಿ ಕೆ ಜೋಶಿ ಸಭೆಯಲ್ಲಿ ಉಪಸ್ಥಿತರಿದ್ದರು.



