ಉತ್ತರ ಕನ್ನಡಜಿಲ್ಲಾ ಸುದ್ದಿ
ಶಿರಸಿಯಲ್ಲಿ 75 ಸಾವಿರ ರೂ.ಮೌಲ್ಯದ ಗಾಂಜಾ ವಶ : ಇಬ್ಬರ ಬಂಧನ

ಕಾರವಾರ : ಮನೆಯೊಂದರಲ್ಲಿ ಸಂಗ್ರಹಿಸಿಟ್ಟ 75 ಸಾವಿರ ರೂ.ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಇಂದು ನಡೆದಿದೆ.
ಶಿರಸಿ ತಾಲೂಕಿನ ಬಂಡಲ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯ ಕಾರ್ಮಿಕರ ಕ್ಯಾಂಪ್ ಒಂದರ ಮನೆ ಮೇಲೆ ದಾಳಿ ನಡೆಸಿದ ಶಿರಸಿ ಅಬಕಾರಿ ಇಲಾಖೆಯ ಅಧಿಕಾರಿಗಳು ಪಂಜಾಬ್ ಮೂಲದ ಜಸ್ವಿಂದರ್ ಸಿಂಗ್ ಮತ್ತು ಅಜಾದಪುರದ ನಿತಿನ್ ಕುಮಾರ್ ಎನ್ನುವ ಇಬ್ಬರನ್ನು ಬಂಧಿಸಿದ್ದಾರೆ.
ಈ ಇಬ್ಬರು ಆರೋಪಿಗಳು ಗಾಂಜಾ ಮಾರಾಟದ ಉದ್ದೇಶದಿಂದ ಚೀಲದಲ್ಲಿ ಗಾಂಜಾ ಹೂವು ಮತ್ತು ಬೀಜಗಳನ್ನು ಸಂಗ್ರಹಿಸಿಟ್ಟಿದ್ದರು. ಘಟನೆ ಸಂಬಂಧ ಶಿರಸಿ ಅಬಕಾರಿ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.




